LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಅಂಗವಾಗಿ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ

ಬೇಲೂರು: ಬೇಲೂರು-ಹಳೇಬೀಡು ದೇಗುಲಗಳು ವಿಶ್ವ ಪಾರಂಪಾರಿಕ ಪಟ್ಟಿಗೆ ಸೇರಿದ್ದರೂ ಅಭಿವೃದ್ಧಿಯಾಗಿಲ್ಲದ ಕಾರಣ ಬೇಲೂರು-ಹಳೇಬೀಡು ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ಒತ್ತಾಯಿಸಿದ್ದಲ್ಲದೆ, ಖಾಸಗಿ ಬಿಲ್ ಸಹ ಮಂಡಿಸಿದ್ದೆ. ಆದರೆ ಸರ್ಕಾರ ಗಮನ ಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಸರ್ಕಾರ ಗಮನ ಸೆಳೆಯುವ ಕೆಲಸ ಮಾಡುತ್ತೇನೆ ಎಂದು ಶಾಸಕ ಎಚ್.ಕೆ.ಸುರೆಶ್ ಹೇಳಿದರು.
ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಹಾಗೂ ಜಾತ್ರ ಮಹೋತ್ಸವದ ಅಂಗವಾಗಿ ಶ್ರೀ ಚನ್ನಕೇಶವ ದೇಗುಲದ ಆವರಣ ಜಯ ಕರ್ನಾಟಕ ಸಂಘಟನೆಯಿಂದ ಬುಧವಾರ ರಾತ್ರಿ ಆಯೋಜಿಸಿದ್ದ 15ನೇ ವರ್ಷದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೇಲೂರಿನಲ್ಲಿ ಎರಡು ದಿನ ನಡೆದ ಶ್ರೀ ಚನ್ನಕೇಶವಸ್ವಾಮಿಯವರ ರಥೋತ್ಸವ ಹಿಂದೆಂದಿಗಿಂತಲೂ ಅದ್ದೂರಿಯಾಗಿ ನೆರವೇರಿದೆ. ಇದಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸುತ್ತೇನೆ. 900 ವರ್ಷಗಳ ಇತಿಹಾಸವನ್ನ ಹೊಂದಿರುವ ಬೇಲೂರು-ಹಳೇಬೀಡು ದೇಗುಲಗಳ ಅಭಿವೃದ್ಧಿಗಾಗಿ ಪುನ: ಸಧನದಲ್ಲಿ ಸರ್ಕಾರದ ಗಮನ ಸೆಳೆಯುವುದಲ್ಲದೆ, ಕ್ಷೇತ್ರದ ಅಭಿವೃದ್ಧಿಗೂ ಮುಂದಾಗಲಿದ್ದೇನೆ. ಜಯ ಕರ್ನಾಟಕ ಸಂಘಟನೆಯಿಂದ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಹಾಸನದ ಹೇಮಾವತಿ ಪ್ರತಿಮೆ ಬಳಿ 5 ದಿನಗಳ ಕಾಲ ಪ್ರತಿಭಟನಾ ಧರಣಿ ನಡೆಸಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಆ ಸಂದರ್ಭ ನಾನೂ ಸಹ ಸಧನದಲ್ಲಿ ಒತ್ತಾಯಿಸಿದ್ದೆ. ಮುಂದಿನ ದಿನಗಳಲ್ಲಿ ಸಂಘಟನೆ ಇನ್ನೂ ಉತ್ತಮ ಕೆಲಸ ಮಾಡಲಿ ಎಂದರು.
ಜಯ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ರಜತ್ ಗಗನ್ ರಾಜ್ ಮಾತನಾಡಿ, ಶ್ರೀ ಚನ್ನಕೇಶವಸ್ವಾಮಿ ದೇಗುಲ ಶಿಲ್ಪಕಲೆಯೊಂದಿಗೆ ರಥೋತ್ಸವ ಹಾಗೂ ಜಾತ್ರ ಮಹೋತ್ಸವ ನಮ್ಮನ್ನು ಪುಳಕಿತಗೊಳಿಸಿದೆ. ನಮ್ಮ ಸಂಘಟನೆ ನಾಡು ನುಡಿ, ನೆಲ ಜಲ ಸೇರಿದಂತೆ ಹಲವಾರು ಕಾರ್ಯಕ್ರಮದ ಜತೆಗೆ ಅನ್ಯಾಯದ ವಿರುದ್ಧ ನಿರಂತ ಹೋರಾಟ, ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಮುಂದಿದೆ. ಬೇಲೂರಿನಲ್ಲಿ ಜಾತ್ರ ಮಹೋತ್ಸವದ ಸಂದರ್ಭ ತಾಲೂಕು ಘಟಕದಿಂದ 15ನೇ ವರ್ಷದಲ್ಲಿ ಸಾಂಸ್ಕೃತಿಕ ಹಬ್ಬ ಆಯೋಜಿಸಿ, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿದ ಗಣ್ಯರನ್ನು ಸನ್ಮಾನಿಸಿದ್ದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಬಿ.ಬಿ.ಶಿವರಾಜ್ ಮಾತನಾಡಿ, ಸಂಘಟನೆ ಹಲವಾರು ಉತ್ತಮ ಕೆಲ¸ದೊಂದಿಗೆ ಹೋರಾಟ ಮಾಡುತ್ತ ಸರ್ಕಾರದ ಗಮನ ಸೆಳೆಯುತ್ತಿದೆ. ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲು ಕಲಾ ಭವನದ ಅವಶ್ಯಕತೆ ಇದ್ದು ಶಾಸಕರು ಗಮನ ಹರಿಸಬೇಕು. ಜಾತ್ರೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಒದಗಿದಬೇಕಿದೆ ಎಂದರು.
ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು ಮಾತನಾಡಿ, ನಮ್ಮ ಸಂಘಟನೆಯಿAದ ಸಾರ್ವಜನಿಕ ಪರವಾದ ಸಾಕಷ್ಟು ಹೋರಾಟ ಮಾಡಿದ್ದೇವೆ. ಜಾತ್ರ ಮಹೋತ್ಸವದ ಸಾಂಸ್ಕೃತಿಕ ಹಬ್ಬದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ, ಸನ್ಮಾನಿಸುತಿದ್ದೇವೆ. ಮುಂದಿನ ದಿನಗಳಲ್ಲಿ ಬೃಹತ್ ಆರೋಗ್ಯ ಶಿಬಿರ ಆಯೋಜಿಸುವ ಗುರಿ
ಹೊಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಬಿ.ಬಿ.ಶಿವರಾಜ್, ಪುರಸಭೆ ಆರೋಗ್ಯಾಧಿಕಾರಿ ಲೋಹಿತ್, ನಿವೃತ್ತ ಸೈನಿಕ ಹಾಗೂ ಪ್ರಗತಿಪರ ರೈತ ಜಿ.ಬಿ.ವೆಂಕಟೇಶಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ, ಪ್ರಗತಿಪರ ರೈತ ಹೊಸಳ್ಳಿ ಕುಮಾರ್‌ರನ್ನು ಸನ್ಮಾನಿಸಲಾಯಿತು.
ಜಯ ಕರ್ನಾಟಕ ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷ ಮುನಿಸ್ವಾಮಿ, ಜಿಲ್ಲಾಧ್ಯಕ್ಷ ಎಂ.ಕೆ.ಆರ್ ಸೋಮೇಶ್, ಪೊಲೀಸ್ ಇನ್ಸ್‌ಪೆಕ್ಟರ್ ರೇವಣ್ಣ, ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಬಿ.ಎಂ.ಸಂತೋಷ್, ಅರ್ಬನ್ ಬ್ಯಾಂಕ್ ನಿರ್ದೇಶಕ ಎಸ್.ಕೆ.ನಾಗೇಶ್, ಕಾರ್ಯಧ್ಯಕ್ಷ ಬಿ.ಎಲ್.ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷರಾದ ಮೀಸೆ ವಸಂತ್, ಗುರುಮೂರ್ತಿ, ಯುವ ಘಟಕದ ಅಧ್ಯಕ್ಷ ಹೇಮಂತ್, ನಗರಾಧ್ಯಕ್ಷ ಜಯರಾಂ, ಆಟೋ ಲಕ್ಷ್ಮಣ್, ಸತೀಶ್ ಸೇರಿದಂತೆ ಇತರರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು