LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಜ್ವಲಂತ ಸಮಸ್ಯೆಯಾಗಿರುವ ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆ ಕಡಿವಾಣ ಹಾಕಬೇಕು ಎಂದು ಸದನದಲ್ಲಿ ಶಾಸಕ ಧೀರಜ್ ಮುನಿರಾಜು ಆಗ್ರಹಿಸಿದರು. ವಿಧಾನಸಭೆಯ ಬಜೆಟ್ ಅಧಿವೇಶನದ ಸದನದಲ್ಲಿ ಭಾಗವಹಿಸಿ ಮಾತನಾಡಿ ತಾಲ್ಲೂಕಿನ ಹಲವೆಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.

ಗ್ರಾಮೀಣ ಭಾಗಗಳಲ್ಲಿ ಅಕ್ರಮವಾಗಿ ಮನೆಗಳಲ್ಲೆ ಮದ್ಯ ಮಾರಾಟ ಮಾಡಲಾಗು ತ್ತಿದೆ ಅಬಕಾರಿ ಮತ್ತು ಪೊಲೀಸ್ ಇಲಾಖೆ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಶಾಸಕರ ಮತಗಟ್ಟೆಯಾದ ವಡ್ಡರಹಳ್ಳಿ ಗ್ರಾಮದಲ್ಲಿ 14 ಜನ ಯುವಕರು ಅತಿ ಹೆಚ್ಚು ಮದ್ಯ ಸೇವನೆ ಮಾಡಿ ಲಿವರ್ ವೈಫಲ್ಯ ಸೇರಿದಂತೆ ಇನ್ನಿತರೆ ಅಂಗಾಂಗ ವೈಫಲ್ಯದಿಂದ ಯುವಕರು ಸಾವನ್ನಪ್ಪಿದ್ದಾರೆ.

ಬಾರ್ ಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಸೇಲ್ಸ್ ಏಜೆಂಟ್‍ರ ರೀತಿಯಲ್ಲಿ ಹೆಚ್ಚು ಹೆಚ್ಚು ಮದ್ಯ ಮಾರಾಟಕ್ಕೆ ಒತ್ತಡವನ್ನ ಹೇರುತ್ತಿದ್ದಾರೆ. ಇದರಿಂದ ಗ್ರಾಮೀಣ ಬಾಗದಲ್ಲಿ ಹೆಚ್ಚು ಅಕ್ರಮ ಮಾರಾಟವಾಗುತ್ತಿದೆ.ಅಲ್ಲದೆ ಪಕ್ಕದ ಆಂಧ್ರ ಪ್ರದೇಶಕ್ಕೆ ಹೊಂದಿ ಕೊಂಡಿರುವ ಜಿಲ್ಲೆಯಾಗಿರುವುದರಿಂದ ಆಂಧ್ರದಿಂದ ಸೇಂದಿ ಕೂಡ ಸರಬರಾಜು ಆಗುತ್ತಿದೆ ಇದರಿಂದ ಆರ್ಥಿಕವಾಗಿ ಹಿಂದುಳಿದ ಪ್ರದೇಶದಯುವಕರು ಕಾಲೋನಿಗಳಲ್ಲಿ ವಾಸಿಸುವವರುಮದ್ಯವನ್ನು ಸೇವಿಸಿ ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ ಕೂಡಲೆ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಮದ್ಯಕ್ಕೆ ದಾಸರಾದ 28 ರಿಂದ 40ವರ್ಷದೊಳಗಿನವರ ವಯಸ್ಕರು ಅನಾರೋಗ್ಯದಿಂದ ಸಾವನ್ನಪ್ಪುತ್ತಿರುವ ಬಗ್ಗೆಯೂ ಸ್ಪೀಕರ್ ಯು.ಟಿ ಖಾದರ್ ಅವರ ಗಮನಕ್ಕೆ ತಂದರು.ಈ ವೇಳೆ ಬೆಂಬಲಕ್ಕೆ ನಿಂತ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮಾತನಾಡಿ ನಾನು ಕೂಡ ದೊಡ್ಡಬಳ್ಳಾಪುರಕ್ಕೆ ಹಲವು ಬಾರಿ ಪ್ರವಾಸ ಕೈಗೊಂಡಿದ್ದಾಗ ಅಕ್ರಮ ಮದ್ಯ ಮಾರಾಟದ ಬಗ್ಗೆ ಗಮನಕ್ಕೆ ಬಂದಿದೆ ಎಂದು ಶಾಸಕ ಧೀರಜ್ ಮುನಿರಾಜು ಬೆಂಬಲಕ್ಕೆ ನಿಂತರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು