LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

CWG 2026: ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ!

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ನ 6ನೇ ದಿನದಂದು ಭಾರತೀಯ ಕ್ರೀಡಾಪಟುಗಳು ಒಟ್ಟು ಮೂರು ಪದಕಗಳನ್ನು ಗೆದ್ದಿದ್ದಾರೆ. ಈ ಮೂರು ಪದಕಗಳು ಟ್ರಾ÷್ಯಕ್ ಅಂಡ್ ಫೀಲ್ಡ್ (ಅಥ್ಲೆಟಿಕ್ಸ್ ಮತ್ತು ಪ್ಯಾರಾ ಅಥ್ಲೆಟಿಕ್ಸ್) ವಿಭಾಗದಲ್ಲೇ ಬಂದಿರುವುದು ವಿಶೇಷ. ಪ್ಯಾರಾ ಟ್ರಾ÷್ಯಕ್‌ನಲ್ಲಿ ದಿಲೀಪ್ ಮಹಾದು ಗಾವಿತ್ ಚಿನ್ನ ಗೆದ್ದರೆ, ಮೊಹಮ್ಮದ್ ಬಾಸಿಲ್‌ಗೆ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಇನ್ನು ಲಾಂಗ್ ಜಂಪ್‌ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಪದಕ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಪುರುಷರ 100 ಮೀಟರ್ (ಖಿ47 ವಿಭಾಗ) ಓಟದ ಸ್ಪರ್ಧೆಯಲ್ಲಿ. ಭಾರತದ ಹೆಮ್ಮೆಯ ಪ್ಯಾರಾ ಅಥ್ಲೀಟ್ ದಿಲೀಪ್ ಮಹಾದು ಗಾವಿತ್ ಕೇವಲ 10.71 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರು. ಇದು ಕೇವಲ ಚಿನ್ನದ ಪದಕವಲ್ಲ, ಬದಲಿಗೆ ಹೊಸ ಕಾಮನ್‌ವೆಲ್ತ್ ಗೇಮ್ಸ್ ದಾಖಲೆಯಾಗಿದೆ!
ಏಕೆಂದರೆ ಕಾಮನ್‌ವೆಲ್ತ್ ಗೇಮ್ಸ್ ಇತಿಹಾಸದಲ್ಲೇ ಈ ನಿರ್ದಿಷ್ಟ ವಿಭಾಗದಲ್ಲಿ ಇದುವರೆಗೆ ಯಾವುದೇ ಕ್ರೀಡಾಪಟು 10.71 ಸೆಕೆಂಡುಗಳಷ್ಟು ವೇಗವಾಗಿ ಓಡಿ ಗುರಿ ತಲುಪಿಲ್ಲ.
ಇದೇ ರೇಸ್‌ನಲ್ಲಿ ಭಾರತದ ಮತ್ತೊಬ್ಬ ಪ್ರತಿಭಾವಂತ ಓಟಗಾರ ಮೊಹಮ್ಮದ್ ಬಾಸಿಲ್ ಎಂ 10.83 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿಯ ಪದಕವನ್ನು ತನ್ನದಾಗಿಸಿಕೊಂಡರು.
ಭಾರತದ ಸ್ಟಾರ್ ಅಥ್ಲೀಟ್ ಮುರಳಿ ಶ್ರೀಶಂಕರ್ ಪುರುಷರ ಲಾಂಗ್ ಜಂಪ್ ಫೈನಲ್‌ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದರು. ಅತ್ಯಂತ ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಸ್ಪರ್ಧೆಯಲ್ಲಿ ಶ್ರೀಶಂಕರ್ 8.09 ಮೀಟರ್ ದೂರ ಜಿಗಿಯುವ ಮೂಲಕ ಜಂಟಿಯಾಗಿ ಬೆಳ್ಳಿಯ ಪದಕಕ್ಕೆ ಮುತ್ತಿಕ್ಕಿದರು. ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಬಂದ ನಂತರ ಶ್ರೀಶಂಕರ್ ನೀಡಿದ ಈ ಪ್ರದರ್ಶನ ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.
ಈ ಮೂರು ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಭಾರತವು 8ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಈವರೆಗೆ ಒಟ್ಟು 15 ಪದಕಗಳನ್ನು (3 ಚಿನ್ನ, 9 ಬೆಳ್ಳಿ, 3 ಕಂಚು) ಗೆದ್ದಿರುವ ಭಾರತ ಮುಂಬರುವ ಪಂದ್ಯಗಳಲ್ಲಿ ಮತ್ತಷ್ಟು ಮೆಡಲ್‌ಗಳನ್ನು ಗೆಲ್ಲುವ ನಿರೀಕ್ಷೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು