LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮತದಾನ ಜಾಗೃತಿಗಾಗಿ ಸೈಕಲ್ ಜಾಥಾ

ಬೆಂಗಳೂರು: ಲೋಕಸಭಾ ಚುನಾವಣೆಯ ಅಂಗವಾಗಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಇಂದು ಹಮ್ಮಿಕೊಂಡಿರುವ ಮತದಾನ ಜಾಗೃತಿಯ ಸೈಕಲ್ ಜಾಥಾ(ಸೈಕ್ಲೋಥಾನ್)ಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಚಾಲನೆ ನೀಡಿದ್ದಾರೆ.

ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಏಪ್ರಿಲ್ 26 ರಂದು ನಡೆಯುವ ಮತದಾನದ ಹಬ್ಬವನ್ನು ಎಲ್ಲರೂ ಸೇರಿ ಒಟ್ಟಾಗಿ ಆಚರಿಸೋಣವೆಂದು ತಿಳಿಸಿದರು.ಕರ್ನಾಣಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಹಾಗೂ ಉತ್ತರ ಕರ್ನಾಟಕದಲ್ಲಿ ಮೇ 7 ರಂದು ಮತದಾನ ನಡೆಯುತ್ತಿದೆ. ಮತ ಚಲಾಯಿಸಲು ಅರ್ಹರಿರುವ ಎಲ್ಲರೂ ತಪ್ಪದೆ ಮತ ಚಲಾಯಿಸೋಣವೆಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಹಾಗೂ ಜಾಥಾಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.ವಿಧಾನ ಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗದಿಂದ, ಕೆ.ಆರ್ ವೃತ್ತದ ನೃಪತುಂಗ ರಸ್ತೆಯ ಮೂಲಕ ಸೈಕಲ್ ಜಾಥಾ ಸಾಗಿ, ಹಡ್ಸನ್ ವೃತ್ತ, ಕಸ್ತೂರ್ ಬಾ ರಸ್ತೆ, ಕ್ವೀನ್ಸ್ ರಸ್ತೆ(ಚಿನ್ನಸ್ವಾಮಿ ಕ್ರೀಡಾಂಗಣ)ಯಿಂದ, ಡಾ. ಬಿ.ಆರ್ ಅಂಬೇಡ್ಕರ್ ರಸ್ತೆಯ ಮೂಲಕ ವಿಧಾನಸೌಧ ಪೂರ್ವ ದ್ವಾರದ ಬಳಿ ಸೈಕ್ಲೋಥಾನ್ ಮುಕ್ತಾಯಗೊಂಡಿತು.

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಚುನಾವಣಾ ರಾಯಭಾರಿಗಳಾದ ಅನುಪ್ ಶ್ರೀಧರ್, ನೀತು ವನಜಾಕ್ಷಿ, ಸೈಕ್ಲಿಸ್ಟ್ ಗಳಲ್ಲಿ ಎನ್.ಎಸ್.ಎಸ್ ವಿದ್ಯಾರ್ಥಿಗಳು, ನಾಗರೀಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು