LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಡಿ.23, 24, 25 ರಂದು ದಾವಣಗೆರೆ ಬೆಣ್ಣೆದೋಸೆ ಹಬ್ಬ: ಜಿಲ್ಲಾಧಿಕಾರಿ

ದಾವಣಗೆರೆ: ದಾವಣಗೆರೆ ಬೆಣ್ಣೆದೋಸೆ ಇತಿಹಾಸ ಪ್ರಸಿದ್ದವಾಗಿದ್ದು ಇದಕ್ಕೊಂದು ಬ್ರಾಂಡಿಂಗ್ ನೀಡಲು ಜಿಲ್ಲಾಡಳಿತ ಡಿಸೆಂಬರ್ 23, 24, 25 ರಂದು ದಾವಣಗೆರೆಯಲ್ಲಿ ಬೆಣ್ಣೆದೋಸೆ ಹಬ್ಬವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೋಸೆ ಉತ್ಸವ ಆಯೋಜನೆಗೆ ಸಂಬಂಧಿಸಿದಂತೆ ಸಿದ್ದತೆಯ ಕುರಿತು ಏರ್ಪಡಿಸಲಾದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಹೋಟೆಲ್ ಮಾಲಿಕರೊಂದಿಗೆ ಚರ್ಚಿಸಲಾಗಿದ್ದು ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗಿದೆ.

ದಾವಣಗೆರೆ ನಗರದ ಎಂ.ಬಿ.ಎ. ಮೈದಾನ ಮತ್ತು ಗ್ಲಾಸ್‍ಹೌಸ್ ಮುಂಭಾಗ ದೋಸೆ ಹಬ್ಬವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಬೆಳಗ್ಗೆ 8 ಗಂಟೆಯಿಂದ ರಾತ್ರಿವರೆಗೆ ದೋಸೆ ಸವಿಯಬಹುದಾಗಿದೆ.ಬೆಣ್ಣೆದೋಸೆ ಹಬ್ಬದಲ್ಲಿ ಸುಮಾರು 5 ಲಕ್ಷ ಜನರು ಭಾಗಿಯಾಗಬೇಕೆಂಬ ಗುರಿ ಹೊಂದಲಾಗಿದೆ. ಇದಕ್ಕಾಗಿ ಎರಡು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಈಗಾಗಲೇ ದೋಸೆ ಹೋಟೆಲ್ ಮಾಲಿಕರೊಂದಿಗೆ ಸಭೆ ನಡೆಸಲಾಗಿದ್ದು 10 ಕ್ಕಿಂತ ಹೆಚ್ಚು ಹೋಟೆಲ್ ಮಾಲಿಕರು ಭಾಗವಹಿಸುವರು. ದೋಸೆ ಹಬ್ಬವನ್ನು ಏರ್ಪಡಿಸುವ ಮೂಲಕ ದಾವಣಗೆರೆ ದೋಸೆಯ ಸಾಂಪ್ರದಾಯಿಕತೆ ಉಳಿಸುವ ಮೂಲಕ ಗುಣಮಟ್ಟವನ್ನು ಕಾಪಾಡಿಕೊಂಡು ದಾವಣಗೆರೆ ಬೆಣ್ಣೆದೋಸೆಗೆ ಬ್ರಾಂಡಿಂಗ್ ಕಲ್ಪಿಸುವುದು ಈ ಹಬ್ಬದ ಉದ್ದೇಶವಾಗಿದೆ.

ದೋಸೆ ಹೋಟೆಲ್‍ಗಳಿಗೆ ಮಾನದಂಡದನ್ವಯ ಮುಂದಿನ ದಿನಗಳಲ್ಲಿ ಅಧಿಕೃತ ಟ್ಯಾಗ್ ನೀಡಲಿದ್ದು ಇದಕ್ಕಾಗಿ ಆಹಾರ ಸುರಕ್ಷತಾ ಕಾಯಿದೆ ನಿಯಮ ಪಾಲನೆ, ಗುಣಮಟ್ಟ, ಕಲಬೆರಕೆ ರಹಿತ ಆಹಾರದ ಮಾನದಂಡಗಳನ್ನು ಅಳವಡಿಸಿಕೊಳ್ಳುವವರಿಗೆ ಈ ಟ್ಯಾಗ್ ನೀಡಲಾಗುತ್ತದೆ ಎಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ . ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು