LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಿ.ಸತ್ಯಪ್ರಕಾಶ್ ನಿರ್ದೇಶನದ "X&Y" ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

ಸತ್ಯ ಪಿಕ್ಚರ್ಸ್ ಗೂಡಿನಿಂದ ಮತ್ತೊಂದು ಹೊಸ ಸಿನಿಮಾವೊಂದು ನಿಮ್ಮ ಮುಂದೆ ಸಂತೋಷದಿಂದ ಬರುತ್ತಿದೆ. ಡಿ.ಸತ್ಯಪ್ರಕಾಶ್ ನಿರ್ದೇಶಿಸಿ, ಒಂದು ಮುಖ್ಯ ಪಾತ್ರದಲ್ಲೂ ಕಾಣಿಸಿಕೊಂಡಿರುವ ಈ ಚಿತ್ರದ ಹೆಸರು X&Y".

ಇದು ಇವತ್ತಿನ ಜನರೇಷನ್ ಕಥೆ. ಅಪ್ಪ-ಅಮ್ಮ ಆದವರ, ಅಪ್ಪ-ಅಮ್ಮ ಆಗುತ್ತಿರುವವರ, ಅಪ್ಪ ?ಅಮ್ಮ ಆಗಬೇಕು ಎಂದುಕೊಂಡವರ ಕಥೆ. ಹಾಗೆಯೇ ಇವತ್ತಿನ ಹುಡುಗ-ಹುಡುಗಿಯರ ಕಥೆ, ಇವತ್ತಿನ ಮಕ್ಕಳ ಕಥೆ.ಇದೊಂದು ಕಾಮಿಡಿ ಜಾನರ್ ಸಿನಿಮಾ ಆಗಿದ್ದು ಅತಿ ಸೂಕ್ಷ್ಮ ವಿಚಾರಗಳನ್ನು ಅಷ್ಟೇ ಸರಳವಾಗಿ ಅದರಲ್ಲೂ ನಗುನಗುತ್ತಾ ನೋಡುವಂತಹ ಕಥೆಯಾಗಿ ನಿಮ್ಮ ಮುಂದೆ ತರುತ್ತಿದ್ದೇವೆ.

ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಎರಡನೇ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಯುತ್ತಿದೆ. ವಾಸುಕಿ-ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನ, ವರದರಾಜ್ ಕಾಮತ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಅಥರ್ವ ಪ್ರಕಾಶ, ಬೃಂದಾ ಆಚಾರ್ಯ, ಅಯನ, ಸುಂದರ್ ವೀಣಾ, ವೀಣಾ ಸುಂದರ್, ದೊಡ್ಡಣ್ಣ ಹೀಗೆ ಹಿರಿಯ ಮತ್ತು ಹೊಸ ಕಲಾವಿದರ ಸಂಗಮ ಚಿತ್ರದಲ್ಲಿದೆ.

ಇದು ನಮ್ಮ ಸಂಸ್ಥೆಯ ನಾಲ್ಕನೇ ಸಿನಿಮಾ. ಈ ಹಿಂದಿನ ಮೂರು ಚಿತ್ರಗಳಿಗೆ ನೀವು ತೋರಿದ ಪ್ರೀತಿ, ತಪ್ಪುಮಾಡಿದಾಗ ನೀವು ತಿದ್ದಿದ ರೀತಿ, ಈ ಸಿನಿಮಾದಲ್ಲೂ ಬೇಕೇ ಬೇಕೆಂಬ ಬೇಡಿಕೆ ನಮ್ಮದು. ಚಿತ್ರದ ಮೊದಲ ಪೋಸ್ಟರನ್ನು ನಿಮ್ಮ ಜೊತೆ ಹಂಚಿಕೊಳ್ಳುತ್ತಾ ನಿಮ್ಮ ಅನಿಸಿಕೆಗಾಗಿ ಎದುರು ನೋಡುತ್ತಿದ್ದೇವೆ ಎನ್ನುತ್ತಾರೆ ಸತ್ಯಪಿಕ್ಚರ್ಸ್ ನ ಸತ್ಯಪ್ರಕಾಶ್ ಹಾಗೂ ತಂಡ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು