LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ದೈಜಿ - ಇದು ರಮೇಶ್ ಅರವಿಂದ್ ರ 106ನೇ ಚಿತ್ರ

ಇದರಲ್ಲಿ ನಾಯಕಿ ನಟಿಯಾಗಿ ರಾಧಿಕಾ ನಾರಾಯಣ್ ಕಾಣಿಸಿಕೊಳ್ಳುತ್ತಿದ್ದಾರೆ ಹಾಗೂ ಅನೇಕ ವಿದೇಶಿ ಕಲಾವಿದರುಗಳು ಇದರಲ್ಲಿ ನಟಿಸಿದ್ದಾರೆ. ದಿಗಂತ್ ರವರು ಕೂಡ ಒಂದು ಮಹತ್ವವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸಿ ರುವವರು ಶಿವಾಜಿ ಸೂರತ್ಕಲ್ 1 ಹಾಗೂ 2 ಚಿತ್ರದ ನಿರ್ದೇಶಕರಾದ ಆಕಾಶ್ ಶ್ರೀವತ್ಸ ರವರು ಹಾಗೂ ಇದರ ನಿರ್ಮಾಪಕರು ರವಿ ಕಶ್ಯಪ್ ರವರು. ರವಿ ಕಶ್ಯಪ್ ರವರ ಜೀವನದಲ್ಲಿ ನಡೆದ ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಅದಕ್ಕೆ ಚಿತ್ರಕಥೆ ಬರೆದು ಆಕಾಶ್ ಶ್ರೀವತ್ಸ ರವರು ಇದನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣವು ಸಂಪೂರ್ಣ ವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಹಂತದ ವಿ. ಎಫ್.ಎಕ್ಸ್. , ರೀ ರೆಕಾರ್ಡಿಂಗ್, ಕೆಲಸಗಳು ನಡೆಯುತ್ತಿದ್ದು ಇನ್ನೇನು ಕೆಲವೇ ತಿಂಗಳುಗಳಲ್ಲಿ ತೆರೆಗೆ ಬರಲಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಮುಗಿಯುತ್ತಿದ್ದಂತೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಬಹಿರಂಗ ಪಡಿಸಲಿದ್ದಾರೆ. ಈ ಚಿತ್ರಕ್ಕೆ ಛಾಯಾಗ್ರಹಣ ವನ್ನು ಶ್ರೀಶ ಕೂದುವಳ್ಳಿ ಯವರು ಮಾಡಿದ್ದು, ಹಿನ್ನೆಲೆ ಸಂಗೀತ vಚಿಟಿಟಿu ಜೂಡಾ ಸ್ಯಾಂಡಿ ರವರು ಮಾಡುತ್ತಿದ್ದಾರೆ. ಈ ಚಿತ್ರದ ವಿಶೇಷತೆ ಎಂದರೆ ದೇಶ ವಿದೇಶದ ಅನೇಕ ಜಾಗದಲ್ಲಿ ಚಿತ್ರೀಕರಣವಾಗಿದೆ - ಇಂಗ್ಲೆAಡ್ ನ ಬಾರ್ನ್ಮೌತ್, ಸ್ಕಾಟ್ ಲ್ಯಾಂಡ್ ನ ಎಡಿನ್ಬರೋ ನಲ್ಲಿ, ವಾರಣಾಸಿ, ಸಕಲೇಶಪುರ, ಮಡಿಕೇರಿ, ಬೆಂಗಳೂರಿನಲ್ಲಿ ಹೀಗೆ ಸಾಕಷ್ಟು ಬೇರೆ ಬೇರೆ ತಾಣದಲ್ಲಿ ಚಿತ್ರಿತ ವಾಗಿದೆ. ಇದೊಂದು ವಿಭಿನ್ನ ಶೈಲಿಯ ಚಿತ್ರವಾಗಿ ಮೂಡಿಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು