LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗ್ರ್ಯಾಂಡ್ ಫಿನಾಲೆ, ಏ.11- 12ರಂದು

ಬೆಂಗಳೂರು: ಜೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ಅಂತಿಮ ಘಟ್ಟ ತಲುಪಿದ್ದು ಫಿನಾಲೆ ಇದೆ ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30 ರವರೆಗೆ ಪ್ರಸಾರ ಆಗಲಿದೆ.
ಸೆಲೆಬ್ರಿಟಿ ಸ್ಪರ್ಧಿಗಳು ಮತ್ತು ಡ್ಯಾನ್ಸರ್ ಗಳು ಜೋಡಿಯಾಗಿ ಪರ್ಫಾರ್ಮೆನ್ಸ್ ನೀಡಿದ ಈ ಶೋನಲ್ಲಿ ವಿವಿಧ ಬಗೆಯ ನೃತ್ಯ ಪ್ರಕಾರಗಳು ಮತ್ತು ಥೀಮ್ ಗಳಿದ್ದಿದ್ದು ಮಾತ್ರವಲ್ಲದೆ ಈ ಕಾರ್ಯಕ್ರಮ ಕಳೆದ ಕೆಲವು ವಾರಗಳಿಂದ ಚಾನೆಲ್‌ನ ವೀಕೆಂಡ್ ಕಾರ್ಯಕ್ರಮಗಳಲ್ಲಿ ಪ್ರಮುಖ ಭಾಗವಾಗಿತ್ತು.ಡಾ. ಶಿವರಾಜ್ ಕುಮಾರ್, ರಚಿತಾ ರಾಮ್, ಅರ್ಜುನ್ ಜನ್ಯ ಮತ್ತು ವಿಜಯ್ ರಾಘವೇಂದ್ರ ಅವ್ರು ಡಾನ್ಸ್ ಕರ್ನಾಟಕ ಡಾನ್ಸ್ ಶೋನ ತೀರ್ಪುಗಾರಾಗಿದ್ದರು. ಇನ್ನು ಈ ಶೋನ ನಿರೂಪಣೆಯನ್ನು ಎಲ್ಲರ ಅಚ್ಚುಮೆಚ್ಚಿನ ಅನುಶ್ರೀ ಮಾಡುತ್ತಿದ್ದಾರೆ. ಈ ಸೀಸನ್ ನಲ್ಲಿ ತೀರ್ಪುಗಾರರು ಸ್ಪರ್ಧಿಗಳ ಪರ್ಫಾಮನ್ಸ್ ನು ಹಾವ, ಭಾವ, ಕಾರ್ಡಿನೇಷನ್, ಓವರ್ ಆಲ್ ಪ್ರೆಸೆಂಟೇಷನ್ ಗಳನ್ನು ನೋಡಿ ತಮ್ಮ ತೀರ್ಪನ್ನು ನೀಡಿರುವುದು ಸ್ಪರ್ಧಿಗಳ ಮತ್ತಷ್ಟು ಇಂಪ್ರೂವ್ಮೆಂಟ್‌ಗೆ ಕಾರಣಾವಾಯಿತು. ಈ ಶೋನಲ್ಲಿ ನೃತ್ಯದ ಮೂಲಕ ಕಥೆ ಹೇಳುವುದಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಇಲ್ಲಿ ಶಾಸ್ತ್ರೀಯ, ಜಾನಪದ ಮತ್ತು ಸಿನಿಮಾ ಶೈಲಿಯ ನೃತ್ಯಗಳನ್ನು ವಿಷಯ ಅಥವಾ ಕಥೆಯ ಆಧಾರದ ಮೇಲೆ ಪ್ರದರ್ಶಿಸಲಾಗಿದ್ದು, ಇದು ವೀಕ್ಷಕರಿಗೆ ಭಾವನಾತ್ಮಕವಾಗಿ ಮತ್ತಷ್ಟು ಹತ್ತಿರವಾಯ್ತು.
ಪೂಜಾ ಮತ್ತು ಅನೂಪ್, ಸಿದ್ದೇಗೌಡ್ರು ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು ಹಾಗೂ ಶಿಕ್ಷಿತ್ ತಾಪಾ ಮತ್ತು ಸಂಜನಾ ಫೈನಲಿಸ್ಟ್ ಗಳಾಗಿದ್ದು ಇವರುಗಳ ನಡುವೆ ಗ್ರಾಂಡ್ ಫಿನಾಲೆಯಲ್ಲಿ ಪೈಪೋಟಿ ನಡೆಯಲಿದೆ. ವಿಭಿನ್ನ ಶೈಲಿಯ ನೃತ್ಯಗಳನ್ನು ಅದ್ಭುತವಾಗಿ ಪ್ರದರ್ಶಿಸಿದ ಎಲ್ಲಾ ಜೋಡಿಗಳು ಈಗ ಅಂತಿಮ ಸುತ್ತನ್ನು ತಲುಪಿದ್ದಾರೆ. ಫಿನಾಲೆ ಎಪಿಸೋಡ್ ನಲ್ಲಿ ಎಲ್ಲಾ ಜೋಡಿಗಳು ಪರ್ಫಾರ್ಮ್ ಮಾಡಿದ ನಂತರ ಈ ಸೀಸನ್ ನ ವಿಜೇತರು ಯಾರು ಅಂತ ಘೋಷಣೆ ಮಾಡಲಾಗುತ್ತದೆ. ಇನ್ನು ಡಾನ್ಸ್ ಕರ್ನಾಟಕ ಡಾನ್ಸ್ ಈ ಸೀಸನ್ ನ ವಿಜೇತರು ಯಾರಾಗಲಿದ್ದಾರೆ ಅನ್ನೋ ಕುತೂಹಲ ವೀಕ್ಷಕರಲ್ಲಿ ಜಾಸ್ತಿ ಆಗಿದೆ.ಸೀಸನ್ ಈಗ ಅಂತಿಮ ಹಂತಕ್ಕೆ ಬಂದಿದ್ದು ಸ್ಪರ್ಧೆ ಮತ್ತಷ್ಟು ಕಠಿಣಗೊಂಡಿದ್ದೆ. ಫಿನಾಲೆಯಲ್ಲಿ ಪ್ರತಿ ಜೋಡಿಯು ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವುದರಿಂದ ಗೆಲ್ಲುವವರು ಯಾರು ಎಂದು ಹೇಳುವುದು ಕಷ್ಟವಾಗಿದೆ. ಈ ಅಂತಿಮ ಸಂಚಿಕೆಗಳಲ್ಲಿ ವಿಜೇತರು ಯಾರೆಂದು ತಿಳಿಯಲಿದ್ದು, ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ.ಯಾರಾಗಲಿದ್ದಾರೆ ಡಾನ್ಸ್ ಕರ್ನಾಟಕ ಡಾನ್ಸ್ ಈ ಸೀಸನ್ ನ ವಿನ್ನರ್ ತಿಳ್ಕೊಳೋಕೆ ವೀಕ್ಷಿಸಿ ಜೀ ಕನ್ನಡ ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿAದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿAದ 9:30 ರವರೆಗೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು