LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜಾಜಿ ಹಾಡು ಬಿಡುಗಡೆ ಮಾಡಿದ ದರ್ಶನ್

ಹೊಸಪ್ರತಿಭೆಗಳ ಸದಾ ಜೊತೆಯಾಗಿ ನಿಲ್ಲುವ ನಟ ದರ್ಶನ್ ಅವರು ಜಾಜಿ ಆಲ್ಬಂ ಸಾಂಗ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಕೈ ನೋವಿನ ನಡುವೆಯೂ ಕನ್ನಡದ ಪ್ರತಿಭೆಯನ್ನು ಪ್ರೋತ್ಸಾಹಿಸಲು ದರ್ಶನ್ ಅವರು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಶಾಸಕ ಸತೀಶ್ ರೆಡ್ಡಿ, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮಾಜಿ ಉಪ ಮಹಾಪೌರರಾದ ಮೋಹನ್ ರಾಜು ಹಾಗೂ ಬಿ.ಸುನೀತಾ ಮೋಹನ್ ರಾಜು ಅವರ ಪುತ್ರಿ ಜಾಜಿ ನಟಿಸಿರುವ ಆಲ್ಬಂ ಸಾಂಗ್ ಬಿಡುಗಡೆ ಆಗಿದೆ. ಈ ಹಾಡಿನ ಹೆಸರು ಕೂಡ ಜಾಜಿ.ಸುಮೋ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುನೀತಾ ಮೋಹನ್ ರಾಜು ಅವರು "ಜಾಜಿ" ಮ್ಯೂಸಿಕ್ ಸಾಂಗ್ ಅನ್ನು ನಿರ್ಮಿಸಿದ್ದು, ಹರ್ಷಿತ್ ಗೌಡ ಸಾಹಿತ್ಯ ಬರೆದು ಸಂಗೀತ ನೀಡಿದ್ದಾರೆ. ಕುಮಾರ್ ಛಾಯಾಗ್ರಹಣ, ಮೋಹನ್ ನೃತ್ಯ ನಿರ್ದೇಶನ, ಐಶ್ವರ್ಯ ರಂಗರಾಜನ್ ಗಾಯನ ಹಾಗೂ ಜಾಜಿ ಅವರು ಅಭಿನಯಿಸಿರುವ "ಜಾಜಿ' ಮ್ಯೂಸಿಕ್ ಸಾಂಗ್ ಡಿ ಬಿಟ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಹಾಡು ಬಿಡುಗಡೆ ಮಾಡಿ ಮಾತನಾಡಿದ ದರ್ಶನ್ ಅವರು, ಈ ಹಾಡು ಬಿಡುಗಡೆ ಮಾಡುವುದಕ್ಕೂ ಮುಂಚೆ ಕೆಲವು ವಿಷಯ ಹೇಳುತ್ತೇನೆ. ಸ್ನೇಹಿತರಾದ ಮೋಹನ್ ರಾಜು ಅವರು ಸಿಕ್ಕಾಗ ತಮ್ಮ ಮಗಳು ನೃತ್ಯ ಕಲಿಯುತ್ತಿರುವ ವಿಷಯದ ಬಗ್ಗೆ ಹೇಳಿದರು. ಮಗಳ ಹೆಸರು ಜಾಜಿ ಎಂದರು. ಈಗಿನ ಟ್ರೆಂಡ್ ನಲ್ಲಿ ಜಾಜಿ ಎನ್ನುವ ಹೆಸರು ಕೇಳಿ ಆಶ್ಚರ್ಯವಾಯಿತು. ಅವರ ಮಗನ ಹೆಸರು ಜಾಣ ಅಂತ ತಿಳಿದು ಇನ್ನೂ ಹೆಚ್ಚಿನ ಆಶ್ಚರ್ಯವಾಯಿತು. ಜಾಜಿ ಅವರ ನೃತ್ಯ ಎಷ್ಟು ಚೆನ್ನಾಗಿದೆ ಎಂದು ಈ " ಜಾಜಿ" ಹಾಡೇ ಹೇಳುತ್ತದೆ. ಡಿ ಬಿಟ್ಸ್ ಮೂಲಕ ಶೈಲಜಾ ನಾಗ್ ಹಾಗೂ ವಿ.ಹರಿಕೃಷ್ಣ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಮಗುವಿಗೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನನ್ನ ಮಗಳು ಜಾಜಿ ದೊಡ್ಡ ಕಲಾವಿದೆಯಾಗಬೇಕೆಂಬುದು ನನ್ನ ತಂದೆ ರಂಗಭೂಮಿ ಕಲಾವಿದರಾದ ದಿ.ಬೋರೇಗೌಡರ ಕನಸ್ಸಾಗಿತ್ತು. ಆ ಕನಸು ಇಂದು ನನಸ್ಸಾಗಿದೆ. ನನ್ನ ಮಗಳ ಮೊದಲ ಹಾಡು "ಜಾಜಿ" ಇಂದು ಬಿಡುಗಡೆಯಾಗಿದೆ. ದರ್ಶನ್ ಅವರು ಅವಳಿಗೆ ಪ್ರೋತ್ಸಾಹ ನೀಡಿದ್ದು ನಿಜಕ್ಕೂ ಅವಳ ಪುಣ್ಯ ಎಂದರೆ ತಪ್ಪಾಗಲಾರದು. ಇನ್ನು ಮುಂದೆ ಅವಳ ಜವಾಬ್ದಾರಿ ಹೆಚ್ಚಿದೆ. ಹಾಡು ಚೆನ್ನಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ ಎಂದರು ಸುನೀತಾ ಮೋಹನ್ ರಾಜು.

ತಂದೆಮೋಹನ್ ರಾಜು ಅವರು ಕೂಡ ಮಾತನಾಡಿ ಮಗಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಬಂದಿರುವ ನಟ ದರ್ಶನ್ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ಹೇಳಿದರು.ಹಾಡಿಗೆ ಸಂಗೀತ ನೀಡಿ, ಸಾಹಿತ್ಯ ಬರೆದಿರುವ ಹರ್ಷಿತ್ ಗೌಡ, ನೃತ್ಯ ನಿರ್ದೇಶಕ ಮೋಹನ್ ಹಾಗೂ ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಹಾಗೂ ವಿ.ಹರಿಕೃಷ್ಣ "ಜಾಜಿ" ಕುರಿತು ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು