LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸ ಜಯಂತಿ

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರುಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತಿ ಇವರ ಸಂಯುಕ್ತ ಆಶ್ರಯದಲ್ಲಿ ದಾಸ ಶ್ರೇಷ್ಠ ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕಿನ ದಂಡಾಧಿಕಾರಿಗಳಾದ ಎಂ. ವಿ.ರೂಪ ರವರು ಶ್ರೀ ಕನಕದಾಸರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಸ್ಪಾರ್ಚನೆ ಮಾಡುವ ಮೂಲಕ ಬೆಳ್ಳಿ ರಥದ ಮೆರವಣಿಗೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ತಾಲ್ಲೂಕು ಕುರುಬ ಸಂಘದ ಅಧ್ಯಕ್ಷರಾದ ಜಗದೀಶ್‍ರವರು ಕನಕದಾಸ ರವರ ಭಾವ ಚಿತ್ರಕ್ಕೆ ಹೂ ಮಾಲೆಯನ್ನು ಹಾಕುವ ಮೂಲಕ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರವಿರುವ ಬೆಳ್ಳಿರಥದ ಮೆರವಣಿಗೆ ಯನ್ನು ಪಟ್ಟಣದಮುಖ್ಯ ರಸ್ತೆಯಲ್ಲಿ, ಗೊಂಬೆ ಕುಣಿತ, ಡೊಳ್ಳು ಹಾಗೂ ತಮಟೆ ವಾದ್ಯಗಳೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ, ಕುರುಬ ಸಮಾಜದ ಮುಖಂಡರಾದ ತಿಮ್ಮಲಾಪುರ ಮೂರ್ತಿ, ಕೋನಸಾಗರ ಅಂಜಿನೇಯ ಹಾಗೂತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರುದ್ರಮುನಿಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ
ಗಳು, ಕುರುಬ ಸಮಾಜದ ಮುಖಂ ಡರು, ಯುವಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು