LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ದಾಸವರೇಣ್ಯ ಶ್ರೀ ವಿಜಯ ದಾಸರು ಚಿತ್ರ ವಿದೇಶದಲ್ಲೂ ಬಿಡುಗಡೆ

"ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರ ಏಪ್ರಿಲ್ 12 ರಂದು ತೆರೆಗೆ ಬರಲಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

"ಶ್ರೀ ಜಗನ್ನಾಥದಾಸರು" ಚಿತ್ರ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ನಂತರ ಕಳೆದವರ್ಷ "ಶ್ರೀಪ್ರಸನ್ನವೆಂಕಟದಾಸರು" ಚಿತ್ರ ಸಹ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಏಪ್ರಿಲ್ 12 ರಂದು ಚಿತ್ರ ತೆರೆಗೆ ಬರಲಿದೆ.

ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ತ್ರಿವಿಕ್ರಮ ಜೋಶಿ ಅವರು ಈ ಚಿತ್ರವನ್ನು ನಿರ್ಮಿಸುವುದರೊಂದಿಗೆ ವಿಜಯದಾಸರ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ವಿಜಯದಾಸರ ಪತ್ನಿ ಅರಳಮ್ಮನ ಪಾತ್ರದಲ್ಲಿ ಶ್ರೀಲತ ಅಭಿನಯಿಸಿದ್ದಾರೆ. ಪ್ರಭಂಜನ ದೇಶಪಾಂಡೆ, ವಿಜಯಾನಂದ ನಾಯಕ್, ಮಾಜಿ ಶಾಸಕರಾದ ಬಸವನಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಜಯಕೃಷ್ಣ ಸಂಗೀತ ನೀಡದ್ದಾರೆ. ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಹಂಪಿ, ಕನಕಗಿರಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ಕನ್ನಡದಲ್ಲಿ "ನವಕೋಟಿ ನಾರಾಯಣ", " ಭಕ್ತ ಕನಕದಾಸ" ಚಿತ್ರದ ನಂತರ ಹರಿದಾಸರ ಕುರಿತಾದ ಯಾವುದೇ ಚಿತ್ರ ಬಂದಿರಲಿಲ್ಲ. ಸುಮಾರು ವರ್ಷಗಳ ನಂತರ 'ಶ್ರೀಜಗನ್ನಾಥದಾಸರು" ಚಿತ್ರ ತೆರೆಗೆ ಬಂತು. ಆನಂತರ "ಶ್ರೀಪ್ರಸನ್ನವೆಂಕಟದಾಸರು", ಈಗ " ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನಾನು ಮೂಲತಃ ಇಂಜಿನಿಯರ್ ಹಾಗೂ ಉದ್ಯಮಿ.

ಹಲವು ವರ್ಷಗಳಿಂದ ರಾಜಕೀಯದಲ್ಲೂ ಸಕ್ರಿಯನಾಗಿದ್ದೇನೆ. "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರವನ್ನು ನಿರ್ಮಾಣ ಮಾಡಿ, ವಿಜಯದಾಸರ ಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ. ದುಡ್ಡು ಮಾಡುವ ಚಿತ್ರ ಮಾಡದೇ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರ ನೀಡುವ ಹಂಬಲದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇನೆ.

ಶ್ರೀಜಗನ್ನಾಥದಾಸರು ಚಿತ್ರ ತೆರೆಕಂಡಾಗ ಜನರು ಭಕ್ತಿಪರವಶರಾಗಿ ಚಿತ್ರ ನೋಡಿದ್ದನ್ನು ಕಂಡಿದ್ದೇನೆ. ಈ ಚಿತ್ರಕ್ಕೂ ಈಗಾಗಲೇ ವಿದೇಶದಲ್ಲಿ ಟಿಕೇಟ್ ಬುಕ್ಕಿಂಗ್ ಆರಂಭವಾಗಿದೆ. ಈ ಚಿತ್ರಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಹಾಗೂ ನಟ ತ್ರಿವಿಕ್ರಮ ಜೋಶಿ.ಚಿತ್ರದಲ್ಲಿ ಅಭಿನಯಿಸಿರುವ ಶ್ರೀಲತ, ವಿಜಯಾನಂದ ನಾಯಕ್ ಹಾಗೂ ವಿತರಕರಾದ ರಾಜು ಮತ್ತು ಆನಂದ್ ಚಿತ್ರದ ಕುರಿತು ಮಾಹಿತಿ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು