LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿನಲ್ಲಿ ವೆಬ್ ವರ್ಕ್ಸ್‍ನಿಂದ ಡೇಟಾ ಸೆಂಟರ್ ಪಾರ್ಕ್ ಎಂ.ಬಿ. ಪಾಟೀಲ

ದಾವೋಸ್: ಸ್ವಿಟ್ಜರ್ಲೆಂಡಿನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರದಂದು ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, `ಈ ಯೋಜನೆಗಳಲ್ಲಿ ವೆಬ್ ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ ಸ್ಥಾಪಿಸಲಿರುವ 100 ಮೆಗಾವ್ಯಾಟ್ ಸಾಮರ್ಥ್ಯದ, 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ಯೋಜನೆ ಕೂಡ ಸೇರಿದೆ.
ಇದಲ್ಲದೆ ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಹ್ಯೂಲೆಟ್ ಪೆಕಾರ್ಡ್ (ಎಚ್.ಪಿ), ಹನಿವೆಲ್, ಐನಾಕ್ಸ್, ವೋಲ್ವೋ, ನೆಸ್ಲೆ, ಕಾಯಿನ್ ಬೇಸ್, ಟಕೇಡಾ ಫಾರ್ಮಾ, ಬಿಎಲ್ ಆಗ್ರೋ ಇತ್ಯಾದಿ ಕಂಪನಿಗಳೊಂದಿಗೆ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪನಿಯು ಕೌಶಲ್ಯಾಭಿವೃದ್ಧಿ ಮತ್ತು ಸುಗಮ ಆಡಳಿತ ಉಪಕ್ರಮಗಳ ತರಬೇತಿ ಕೊಡಲಿದೆ. ಹಿಟಾಚಿ ಕಂಪನಿಯು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಇ-ಗವರ್ನೆನ್ಸ್ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಲುಲು ಸಮೂಹವು ಹಣ್ಣು ಮತ್ತು ತರಕಾರಿ ಸಂಸ್ಕರಣೆ ಕ್ಷೇತ್ರದಲ್ಲಿ ಹೆಜ್ಜೆ ಗುರುತು ಮೂಡಿಸಲು ಉತ್ಸುಕವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಒಡಂಬಡಿಕೆಗಳು ಕಾರ್ಯರೂಪಕ್ಕೆ ಬರುವ ಮೂಲಕ ರಾಜ್ಯವು ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಕಾಣಲಿದೆ. ಜೊತೆಗೆ, ಮಾರುಕಟ್ಟೆಯಲ್ಲಿ ಇರುವ ಅವಕಾಶಗಳನ್ನು ಅತ್ಯಾಧುನಿಕ ಮೂಲಸೌಲಭ್ಯಗಳ ಮೂಲಕ ಗರಿಷ್ಠ ಮಟ್ಟದಲ್ಲಿ ಸದ್ಬಳಕೆ ಮಾಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ. ಈ ಹೂಡಿಕೆಗಳಿಂದ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಭಾಗಗಳು ಮುಂಚೂಣಿಗೆ ಬರಲಿದ್ದು, ಈ ಯೋಜನೆಗಳಿಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ವಿವರಿಸಿದ್ದಾರೆ.

ದಾವೋಸ್ ಗೆ ತೆರಳಿರುವ ನಿಯೋಗದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್,ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು