LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ; ಡಿಸಿಎಂ

ಬೆಂಗಳೂರು: "ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು, "ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ,ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಬಿಜೆಪಿ ಅವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ."
ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, "ಅವರು ಹೋಗಿ ಕಟ್ಟಿ ಹಾಕಿಕೊಳ್ಳಲಿ.

ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ" ಎಂದು ತಿರುಗೇಟು ನೀಡಿದರು.ನಿಮ್ಮ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ನೀಡಿದ್ದು, ತನಿಖೆ ಆರಂಭವಾಗಿರುವ ಬಗ್ಗೆ ಕೇಳಿದಾಗ, "ನನಗೆ ಯಾವುದೇ ರೀತಿಯ ನೊಟೀಸ್ ಬಂದಿಲ್ಲ. ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ" ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು