LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅನಾರೋಗ್ಯ: ಹೆಣ್ಣಾನೆ ಸಾವು

ಗುಂಡ್ಲುಪೇಟೆ: ಹೆಣ್ಣಾನೆಯೂಂದು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಮೊಳೆಯೂರು ಶಾಖೆಯ ವದಲೀಪೂರ್ವ ಗಸ್ತಿನ ಹಿಡುಗಲ ಪಂಚೀ ಕೆರೆಯ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ಕಾಡಾನೆ ಸುಮಾರು 25 ರಿಂದ 30 ವಯಸ್ಸಿನ ಹೆಣ್ಣಾನೆ ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬಂದಿದ್ದು ಇಲಾಖೆಯ ವೈದ್ಯರು ಚಿಕಿತ್ಸೆ ನೀಡಿದರು ಆದರೆ ಸೋಮವಾರ ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿಸಿದರು.

ನಂತರ ಸ್ಥಳಕ್ಕೆ ಭೇಟಿ ನೀಡಿದ ಶ್ರೀ ಎಸ್.ಪ್ರಭಾಕರನ್, ಭಾಅಸೇ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗು ನಿರ್ದೇಶಕರು, ಬಂಡೀಪುರ, ಶ್ರೀ ಜಿ.ರವೀಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಳು ಡಾ|| ವಾಸೀಂ ಮಿರ್ಜಾ, ಇಲಾಖಾ ಪಶು ವೈದ್ಯಾಧಿಕಾರಿಗಳು, ಬಂಡೀಪುರ, ಇವರ ಸಮಕ್ಷಮ ಮೃತ ಕಾಡಾನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು.

ಕಾಡಾನೆಯ ಅಂಗಾಂಗಳನ್ನು ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸ್ಯಾಂಪಲ್ಗಳನ್ನು ಕಳುಹಿಸಲು ತೀರ್ಮಾನಿಸಿ,ಬಳಿಕ ಮೃತ ಹೆಣ್ಣಾನೆಯನ್ನು ಅಲ್ಲಿಯೇ ಜೆ.ಸಿ.ಬಿ ಸಹಾಯದಿಂದ ಗುಂಡಿ ತೆಗೆದು ಹೂಳಲಾಯಿತು ಎಂದು ತಿಳಿಸಿದ್ದರು ಈ ಸಂದರ್ಭದಲ್ಲಿ ಹೆಡಿಯಾಲ ಉಪ ವಿಭಾಗ.ಹೆಡಿಯಾಲ ಕು. ಅಮೃತಾ ಮಾಯಪ್ಪನವರ್, ವಲಯ ಅರಣ್ಯಾಧಿಕಾರಿ.ಮೂಳೆಯೂರು ವಲಯ ಮತ್ತು ಶ್ರೀ ಪುನೀತ್ ಕುಮಾರ್ ಡಿ.ವಲಯ ಅರಣ್ಯಾಧಿಕಾರಿ ಐನೂರು ಮಾರಿ ಗುಡಿ ವಲಯ.ಶ್ರೀ ರಘುರಾಮ್, ಎನ್‍ಟಿಸಿಎ ಪ್ರತಿನಿಧಿ ಹಾಗೂ ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು