LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಜೂ.30ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಸಡಗರ, ಸಂಭ್ರಮದ ಆಚರಣೆಗೆ ನಿರ್ಧಾರ

ಚಾಮರಾಜನಗರ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಜೂನ್ 30ರಂದು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಯಿತು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸುವ ಸಲುವಾಗಿ ಮೊದಲಿಗೆ ಸಭೆಯಲ್ಲಿ ಹಾಜರಿದ್ದ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಸAಸ್ಥೆಗಳ ಪ್ರತಿನಿಧಿಗಳಿಂದ ಸಲಹೆ, ಅಭಿಪ್ರಾಯ, ಅನಿಸಿಕೆಗಳನ್ನು ಆಲಿಸಲಾಯಿತು.
ನಾಡಪ್ರಭು ಕೆಂಪೇಗೌಡ ಅವರ ಜೀವನ-ಸಾಧನೆಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೆಂಪೇಗೌಡ ಅವರ ಕುರಿತು ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ಕಾರ್ಯಕ್ರಮಕ್ಕೆ ಕೆಂಪೇಗೌಡ ಅವರ ಅಭಿವೃದ್ಧಿಪರ ಚಿಂತನೆಗಳನ್ನು ಪ್ರಸ್ತುತಪಡಿಸುವ ಉತ್ತಮ ಭಾಷಣಕಾರರನ್ನು ಆಹ್ವಾನಿಸಬೇಕು. ಕಾರ್ಯಕ್ರಮಕ್ಕೂ ಮೊದಲು ವೇದಿಕೆಯಲ್ಲಿ ಕಲಾವಿದರಿಂದ ಹಾಡುಗಾರಿಕೆ ಇರಬೇಕು. ಕಾರ್ಯಕ್ರಮ ವ್ಯವಸ್ಥಿತವಾಗಿ ಆಯೋಜನೆಯಾಗಬೇಕು ಎಂದು ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯ ಸಲಹೆಗಳನ್ನು ವ್ಯಕ್ತಪಡಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಮಾತನಾಡಿ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಕಾರ್ಯಕ್ರಮವನ್ನು ಜೂನ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮAದಿರದಲ್ಲಿ ಆಯೋಜಿಸಲಾಗುತ್ತದೆ. ಶಿಷ್ಟಾಚಾರ ಪ್ರಕಾರವೇ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು.
ನಾಡಪ್ರಭು ಕೆಂಪೇಗೌಡ ಅವರ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ನಡೆಸಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಗುವುದು. ಕಾರ್ಯಕ್ರಮ ದಿನದಂದು ಸಭಾಂಗಣವನ್ನು ತಳಿರು-ತೋರಣಗಳಿಂದ ಸಿಂಗರಿಸಬೇಕು. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕಮಟ್ಟದ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ವೇದಿಕೆ ಅಲಂಕಾರ ಸೇರಿದಂತೆ ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗಾಗಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ನಗರಸಭೆ ಪೌರಾಯುಕ್ತರಾದ ಪರಶುರಾಮ ಎಂ ಛಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸುಷ್ಮಾ, ಸಮುದಾಯದ ಮುಖಂಡರಾದ ಸುದರ್ಶನಗೌಡ, ಚಾ.ರಂ. ಶ್ರೀನಿವಾಸಗೌಡ, ಪುಟ್ಟಸ್ವಾಮಿಗೌಡ, ಸಿ.ಬಿ. ನಾಗೆಂದ್ರೇಗೌಡ, ವೆಂಕಟರಮಣಸ್ವಾಮಿ ಪಾಪು, ಪಣ್ಯದಹುಂಡಿ ರಾಜು, ಚಿನ್ನಮುತ್ತು, ಮಹೇಶ್‌ಗೌಡ, ಕರಿಯನಕಟ್ಟೆ ಚಿನ್ನಸ್ವಾಮಿ, ಸೋಮಣ್ಣ, ರವಿ, ರಘು, ನಾಗರಾಜು, ಪ್ರಕಾಶ್, ಸೋಮಶೇಖರ್, ಚಿಕ್ಕರಂಗೇಗೌಡ, ಆರ್. ಮಹೇಶ್, ಗೋವಿಂದರಾಜು, ರವಿಚಂದ್ರಪ್ರಸಾದ್, ಸಿ.ಎಂ. ನರಸಿಂಹಮೂರ್ತಿ, ಸಿ.ಎನ್. ಮಹೇಶ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು