LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಾನವೀಯ ಮೌಲ್ಯಗಳು ಸಾಧನೆಗೆ ದಾರಿ ದೀಪ: ಅನ್ನದಾನಪ್ಪ

ಕನಕಪುರ: ಸಾಮಾಜಿಕ ಚಿಂತನೆಯ ಕಾಯಕ ಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಸೃಜನಶೀಲ ಸಂಸ್ಕೃತಿ ಚಿಂತಕ ಡಾ. ಚಂದ್ರ ಎಂ (ನಮನ
ಚಂದ್ರು) ರವರ ಸಾಧನೆ ಯುವ ಸಮುದಾಯಕ್ಕೆ ಮಾದರಿ ಎಂದು ಬಹುಜನ ಚಳುವಳಿ ರಾಜ್ಯ ನಾಯಕ ಬಿ ಅನ್ನದಾನಪ್ಪ ತಿಳಿಸಿದರು.

ನಗರದ ಮಾತೃಶ್ರೀ ನಮನ ಸಂಸ್ಥೆ ಕಛೇರಿಯಲ್ಲಿ ಇಷ್ಟ ಚಾರಿಟಬಲ್ ಟ್ರಸ್ಟ್ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕನಕಪುರ ಲಯನ್ ಸಂಸ್ಥೆ ನೂತನ ಸದಸ್ಯ ಡಾ. ನಮನ ಚಂದ್ರು ರವರಿಗೆ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಈ ಭೂಮಿಯ ಮೇಲೆ ಎಲ್ಲರಿಗೂ ಕಷ್ಟ,ಸುಖ,ದುಃಖ ದುಮ್ಮಾಗಳು ಇರುವುದು ಸಹಜ ಅವುಗಳನ್ನು ನಮ್ಮ ಜೀವನದಲ್ಲಿ ಮೆಟ್ಟಿ ಎದುರಿಸಿ ಸಾಮಾಜಿಕ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡು ಸಮಾನತೆ ಸಹೋದರತ್ವ ಮಾನವೀಯ ಮೌಲ್ಯದ ಗುಣಗಳನ್ನು ಅಳವಡಿಸಿಕೊಂಡು ಮುನ್ನುಗ್ಗಿದಾಗ ಮಾತ್ರ ಸಾಧಕ ರಾಗಲು ಸಾಧ್ಯವಾಗುತ್ತದೆ ಎಂದರು.

ಡಾ. ನಮನ ಚಂದ್ರುರವರ ಸಾಮಾಜಿಕ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಲಯನ್ ಸಂಸ್ಥೆ ಸದಸ್ಯರನ್ನಾಗಿ ಆಯ್ಕೆ ಮಾಡಿಕೊಂಡಿರುವುದು ಶ್ಲಾಘನೀಯವಾಗಿದ್ದು ಕನ್ನಡ ನಾಡಿನ ನೆಲ ಜಲ ಭಾಷೆ ಜಾನಪದ ಕಲೆ ಸಾಹಿತ್ಯ ಸಂಸ್ಕೃತಿ ಪರಂಪರೆಯ ಉಳಿವಿ ಗಾಗಿ ನೂರಾರು ಗುಣಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಿ ಜಾನಪದ ಸೇವೆ ಸಲ್ಲಿಸುತ್ತಿರುವುದರ ಜೊತೆಗೆ ನೊಂದ ಬಡ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಾ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಡಾ. ನಮನ ಚಂದ್ರು ರವರ ಸೇವೆಗೆ ಸರ್ಕಾರದ ಸ್ಥಾನಮಾನ ಸಿಗಬೇಕು, ಮುಂದಿನ ದಿನಗಳಲ್ಲಿ ಯುವಚೇತನ ಡಾ. ಚಂದ್ರುರವರ ಜೀವನ ಸಾಧನೆಯ ಕುರಿತು ಪುಸ್ತಕ ಬಿಡುಗಡೆ ಮಾಡ ಲಾಗುವುದು ಎಂದರು.

ಡಾ. ನಮನ ಚಂದ್ರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ಪ್ರಶಸ್ತಿ ಗೌರವ ಸನ್ಮಾನಗಳು ನಮಗೆ ಇನ್ನೂ ಹೆಚ್ಚಿನ ಸಾಮಾಜಿಕ ಜವಾಬ್ದಾರಿ ನೀಡುತ್ತವೆ ಹುಟ್ಟು ಉಚಿತ ಸಾವು ಖಚಿತ ಎನ್ನುವ ಮಾತಿನಂತೆ ನಮ್ಮ ಜೀವಿತಾವಧಿ ಯಲ್ಲಿ ಸಮಾಜದ ಋಣ ತೀರಿಸಬೇಕು ಹಾಗೂ ಸಮಾಜ ನಮಗೆ ಏನು ನೀಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವು ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಅರ್ಥೈಸಿ ಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಇಷ್ಟ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪ್ರವೀಣ್ ಕುಮಾರ್. ಹೆಚ್, ಸ್ವ ಕ.ರ.ವೇದಿಕೆ ಜಿಲ್ಲಾಧ್ಯಕ್ಷ ಭಾಸ್ಕರ್, ಕನ್ನಡ ಸೇನೆ ತಾಲೂಕು ಅಧ್ಯಕ್ಷ ಜಯಸಿಂಹ, ಉಪನ್ಯಾಸಕ ಚಂದ್ರಾಜ್, ಮುಖಂಡರಾದ ಪ್ರಶಾಂತ್ ಹೊಸದುರ್ಗ, ಟಿ ಕೃಷ್ಣಮೂರ್ತಿ, ಆರ್ ರಮೇಶ್, ಎಚ್.ಎಸ್ ಲೋಕೇಶ್, ಎಂ ನಾಗೇಶ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು