LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಒಲಿಂಪಿಕ್ಸ್ ಬಾಕ್ಸಿಂಗ್ ಅರ್ಹತಾ ಟೂರ್ನಿ: ದೀಪಕ್ ನಿರ್ಗಮನ

ಬುಸ್ಟೊ ಅರ್ಸಿಜಿಯೊ, ಇಟಲಿ: ಇಲ್ಲಿ ನಡೆಯುತ್ತಿರುವ ಮೊದಲ ಒಲಿಂಪಿಕ್ಸ್ ಬಾಕ್ಸಿಂಗ್ ವಿಶ್ವ ಅರ್ಹತಾ ಟೂರ್ನಿಯಲ್ಲಿ ಭಾರತದ ಅಭಿಯಾನವು ನಿರಾಶಾದಾಯಕವಾಗಿ ಪ್ರಾರಂಭವಾಯಿತು. ಪದಕದ ನಿರೀಕ್ಷೆ ಮೂಡಿಸಿದ್ದ ದೀಪಕ್ ಭೋರಿಯಾ (51 ಕೆಜಿ) ಮತ್ತು ನರೇಂದರ್ ಬರ್ವಾಲ್ (92 ಕೆಜಿ) ಆರಂಭಿಕ ಸುತ್ತಿನಲ್ಲೇ ನಿರ್ಗಮಿಸಿದರು.

ವಿಶ್ವ ಚಾಂಪಿಯನ್‍ಷಿಪ್‍ನ ಕಂಚಿನ ಪದಕ ವಿಜೇತ ದೀಪಕ್ ಭೋರಿಯಾ (51 ಕೆಜಿ) ಅವರು 64ರ ಘಟ್ಟದ ಅಜರ್‍ಬೈಜಾನ್‍ನ ಹುಸೇನೊವ್ ನಿಜತ್ ವಿರುದ್ಧ ಮುಗ್ಗರಿಸಿದರು.2019ರ ವಿಶ್ವ ಚಾಂಪಿಯನ್‍ಷಿಪ್‍ನ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಲ್ ಅವರನ್ನು ಹಿಂದಿಕ್ಕಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಭೋರಿಯಾ ಅವರು 2-3ರಿಂದ ಹುಸೇನೊವ್ ಅವರಿಗೆ ಮಣಿದರು.

ಮೊದಲ ಎರಡು ಸುತ್ತುಗಳಲ್ಲಿ ಇಬ್ಬರೂ ಬಾಕ್ಸರ್‍ಗಳ ನಡುವೆ ತೀವ್ರ ಪೈಪೋಟಿ ಕಂಡುಬಂತು. ಆದರೆ, ಹುಸೇನೊವ್ ಅವರು ವೇಗದ ಚಲನೆಯ ಲಾಭ ಪಡೆದು, ರಿಂಗ್‍ನಲ್ಲಿ ಭೋರಿಯಾ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಅಂತಿಮ ಮೂರು ನಿಮಿಷದಲ್ಲಿ ಭಾರತದ ಸ್ಪರ್ಧಿ ತಿರುಗೇಟು ನೀಡಿದರೂ ಅದು ಗೆಲುವಿಗೆ ಸಾಕಾಗಲಿಲ್ಲ. ನರೇಂದರ್ ಅವರು ಜರ್ಮನಿಯ ನೆಲ್ವಿ ಟಿಯಾಫಕ್ ವಿರುದ್ಧ 3-2ರಿಂದ ಪರಾಭವಗೊಂಡರು. ಆರಂಭಿಕ ಸುತ್ತಿನಲ್ಲಿ ಮೇಲುಗೈ ಸಾಧಿಸಿದ್ಧ ಭಾರತದ ಬಾಕ್ಸರ್ ನಂತರದ ಸುತ್ತಿನಲ್ಲಿ ಮುಗ್ಗರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು