LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟ್ವೆಂಟಿ-20 ರ್ಯಾಂಕಿಂಗ್: ದೀಪ್ತಿ ಶರ್ಮಾಗೆ ಭಡ್ತಿ

ಹೊಸದಿಲ್ಲಿ: ಭಾರತದ ದೀಪ್ತಿ ಶರ್ಮಾ ಮಂಗಳವಾರ ಬಿಡುಗಡೆಯಾಗಿರುವ ಐಸಿಸಿ ಮಹಿಳೆಯರ ಟ್ವೆಂಟಿ-20 ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಒಂದು ಸ್ಥಾನ ಭಡ್ತಿ ಪಡೆದು ಜಂಟಿ 2ನೇ ಸ್ಥಾನ ಪಡೆದರೆ, ದೀಪ್ತಿಯ ಸಹ ಆಟಗಾರ್ತಿ ರೇಣುಕಾ ಸಿಂಗ್ ಒಂದು ಸ್ಥಾನ ಮೇಲಕ್ಕೇರಿ 10ನೇ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಮ್ಲಾಬಾ ಆಸ್ಟ್ರೇಲಿಯ ವಿರುದ್ಧ 2 ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆದು 2ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕುಸಿದ ಕಾರಣ ದೀಪ್ತಿ ಭಡ್ತಿ ಪಡೆದಿದ್ದಾರೆ. ದೀಪ್ತಿ ಅವರು ಪಾಕಿಸ್ತಾನದ ಸಾದಿಯಾ ಇಕ್ಬಾಲ್ರೊಂದಿಗೆ 2ನೇ ಸ್ಥಾನ ಹಂಚಿಕೊಂಡಿದ್ದಾರೆ. ಇಂಗ್ಲೆಂಡ್ ನ ಸಾರ್ಹಾ ಗ್ಲೆನ್ 4ನೇ ಸ್ಥಾನದಲ್ಲಿದ್ದಾರೆ.

ಬೌಲರ್ ಗಳ ಟಿ-20 ರ್ಯಾಂಕಿಂಗ್ ನಲ್ಲಿ ಇಂಗ್ಲೆಂಡ್ ಸ್ಪಿನ್ನರ್ ಸೋಫಿ ಎಕ್ಸೆಲ್ಸ್ಟೋನ್ ಅಗ್ರ ಸ್ಥಾನ ಉಳಿಸಿಕೊಂಡಿದ್ದಾರೆ. ಆಲ್ರೌಂಡರ್ಗಳ ವಿಭಾಗದಲ್ಲಿ ಅಗ್ರ-10ರಲ್ಲಿ ಯಾವುದೇ ಬದಲಾವಣೆ ಇಲ್ಲ. ದೀಪ್ತಿ 4ನೇ ಸ್ಥಾನ ಉಳಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST