LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಸಂವಿಧಾನದ ರಕ್ಷಣೆ-ಜನರ ರಕ್ಷಣೆ: ಸಿಎಂ

ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.ಮೈಸೂರಿನ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನೆಲೆ ಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆ.

75ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು, ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿವೆ,

ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಂಡು ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿವೆ.

ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ,ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು,ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳನ್ನು ಖಾತ್ರಿಪಡಿಸುವ ವಿಷಯಗಳ ಬಗೆಗೆ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.

ಸಮಾವೇಶದಲ್ಲಿ ಸಂವಿಧಾನ ರಚನಾ ಸಭೆಯಲ್ಲಿ ನಡೆದ ಅರ್ಥಪೂರ್ಣ ಚರ್ಚೆಗಳ 10 ವಾಲ್ಯೂಮ್ ಗಳ ಪುಸ್ತಕಗಳು ಮುದ್ರಿತವಾಗಿದ್ದು ಪುಸ್ತಕಗಳ ಬಿಡುಗಡೆಯೂ ಇರಲಿದೆ.ಸಂವಿಧಾನದ ಅಂಗೀಕಾರದ ಮುನ್ನಾದಿನ ಅಂಬೇಡ್ಕರರು ಮಾಡಿದ ಅಮೋಘ ಭಾಷಣವನ್ನೂ ಪುಸ್ತಕ ಒಳಗೊಂಡಿರುವುದರೊಂದಿಗೆ ಡಾ.ಬಾಬು ರಾಜೇಂದ್ರ ಪ್ರಸಾದ್, ರಾಜಾಜಿ ಅಂತಹವರೂ ಸೇರಿದಂತೆ ಸಂವಿಧಾನ ರಚನಾ ಸಭೆಯ ಮುತ್ಸದ್ದಿಗಳ ಮಾತುಗಳು ಪುಸ್ತಕದಲ್ಲಿರಲಿವೆ ಎಂದರು.

ಪ್ರಮುಖವಾಗಿ ಸಂವಿಧಾನ ಜಾರಿಗೆ ಬಂದ 75 ವರ್ಷಗಳಲ್ಲಿ ಸಂವಿಧಾನದ ಆಶಯ ಹಾಗೂ ಧ್ಯೇಯೋದ್ದೇಶ ಎಷ್ಟರ ಮಟ್ಟಿಗೆ ಈಡೇರಿದೆ ಎಂಬ ಅಂಶವೂ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದರು.ಸಂವಿಧಾನವನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಹವಣ ಹವಣಿಸುತಿದ್ದು, ಸಂವಿಧಾನಕ್ಕೆ ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಂತಹವರಿಗೆ ಸಂವಿಧಾನ ಜಾಥಾ ಉತ್ತರ ಕೊಡಲಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು