LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್- 20 ಆರಂಭಕ್ಕೂ ಮುನ್ನವೇ ಹೊಸ ಸಂಚಲನ ಶುರುವಾಗಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ತಮ್ಮದಾಗಿಸಿಕೊಳ್ಳಲು ಈಗ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಆಫರ್‌ನೊಂದಿಗೆ ರೇಸ್‌ಗೆ ಧುಮುಕಿದೆ. ಪ್ರಮುಖ ಮಾಧ್ಯಮಗಳ ವರದಿಯ ಪ್ರಕಾರ, ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡದಾದ `ಪ್ಲೇಯರ್ ಸ್ವಾಪ್' ಒಪ್ಪಂದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಾಗಿದೆ.
ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ತಂಡದಿAದ ಸೆಳೆಯಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಮುಂಬೈ ಇಂಡಿಯನ್ಸ್ಗೆ ಇಬ್ಬರು ಸ್ಟಾರ್ ಆಟಗಾರರು ಹಾಗೂ ಭಾರಿ ನಗದು ಒಳಗೊಂಡ ಮೆಗಾ ಆಫರ್ ನೀಡಿದೆ.ಅಂದರೆ ಅಕ್ಷರ್ ಪಟೇಲ್ ಹಾಗೂ ಪೃಥ್ವಿ ಶಾ ಅವರನ್ನು ನೀಡುವುದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಿಳಿಸಿದೆ. ಇದರ ಜೊತೆಗೆ 10 ಕೋಟಿ ರೂ. ಹೆಚ್ಚುವರಿ ನಗದನ್ನು ಪಾವತಿಸುವುದಾಗಿ ಹೇಳಿಕೊಂಡಿದೆ.ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಆಫರ್ ಅನ್ನು ಮುಂಬೈ ಇಂಡಿಯನ್ಸ್ ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಬದಲಾಗಿ ಪೃಥ್ವಿ ಶಾ ಬದಲಿಗೆ ಯುವ ಆಟಗಾರ ಸಮೀರ್ ರಿಝ್ವಿ ಅವರನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ.ಪೃಥ್ವಿ ಶಾ ಕಳೆದ ಎರಡು ಸೀಸನ್‌ಗಳಲ್ಲಿ ಸ್ಥಿರ ಪ್ರದರ್ಶನ ನೀಡದ ಕಾರಣ ಅವರ ಬಗ್ಗೆ ಮುಂಬೈ ಇಂಡಿಯನ್ಸ್ ಆಸಕ್ತಿ ಹೊಂದಿಲ್ಲ. ಅದರ ಬದಲಿಗೆ 2026ರ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಿಗ್-ಹಿಟ್ಟರ್ ಸಮೀರ್ ರಿಝ್ವಿ ಹಾಗೂ ಅಕ್ಷರ್ ಪಟೇಲ್ ಜೊತೆ ನೀಡಿದರೆ ಟ್ರೇಡ್ ಮಾಡಬಹುದು ಮುಂಬೈ ಇಂಡಿಯನ್ಸ್ ತಿಳಿಸಿದೆ ಎನ್ನಲಾಗಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಸಮೀರ್ ರಿಝ್ವಿ ಅವರನ್ನು ಬಿಟ್ಟು ಕೊಡಲು ಸಿದ್ಧರಿಲ್ಲ. ಹೀಗಾಗಿ ಈ ಟ್ರೇಡ್ ಪ್ರಕ್ರಿಯೆ ಏನಾಗಲಿದೆ ಎಂಬುದೇ ಸದ್ಯದ ಕುತೂಹಲ.
ಈ ಮೊದಲು ಹಾರ್ದಿಕ್ ಪಾಂಡ್ಯ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ತೆರೆಮರೆಯ ಪ್ರಯತ್ನ ನಡೆಸಿದ್ದರು. ಮುಂಬೈ ತಂಡವು ಸಿಎಸ್‌ಕೆಯಿಂದ ಶಿವಂ ದುಬೆ ಮತ್ತು ಡೆವಾಲ್ಡ್ ಬ್ರೆವಿಸ್ ಅವರನ್ನು ಕೇಳಿತ್ತು. ಆದರೆ ಆರ್ಥಿಕ ಮೌಲ್ಯಮಾಪನ ಮತ್ತು ಹೆಚ್ಚುವರಿ ಹಣದ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಸಿಎಸ್‌ಕೆ ಜೊತೆಗಿನ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು