LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಾಸಕರ ಖರೀದಿಗೆ ಯತ್ನ ಬಿಜೆಪಿ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್ ಆರೋಪ

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಆಪ್ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ 7 ಆಮ್ ಆದ್ಮಿ ಪಕ್ಷದ ಶಾಸಕರನ್ನ ಖರೀದಿಸಲು ಪ್ರಯತ್ನಿಸುತ್ತಿದೆ. 7 ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಸೋಶಿಯಲ್ ಮೀಡಿಯಾ ಘಿ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಕೇಜ್ರಿವಾಲ್, ಬಿಜೆಪಿ ಆಪ್ ಶಾಸಕರೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಪ್ ಸರ್ಕಾರವನ್ನು ಸಂಪೂರ್ಣವಾಗಿ ಮುಗಿಸಲು ಪ್ಲ್ಯಾನ್ ಮಾಡಿದೆ. ಆದ್ದರಿಂದ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದೆ ಎಂದು ಕಿಡಿ ಕಾರಿದ್ದಾರೆ.
ಇತ್ತೀಚೆಗೆ ಬಿಜೆಪಿ ನಾಯಕರು ಎಎಪಿಯ 7 ಶಾಸಕರನ್ನ ಸಂಪರ್ಕಿಸಿದ್ದಾರೆ.

ಕೆಲ ದಿನಗಳ ನಂತರ ನಾವು ಕೇಜ್ರಿವಾಲ್ ಅವರನ್ನ ಬಂಧಿಸುತ್ತೇವೆ. ನಂತರ ಶಾಸಕರನ್ನ ಇಬ್ಭಾಗ ಮಾಡುತ್ತೇವೆ. ದೆಹಲಿಯ ಆಪ್ ಸರ್ಕಾರವನ್ನ ಸಂಪೂರ್ಣವಾಗಿ ಉರುಳಿಸುತ್ತೇವೆ. ಈಗಾಗಲೇ 21 ಶಾಸಕರೊಟ್ಟಿಗೆ ಮಾತುಕತೆ ನಡೆಸಿದ್ದೇವೆ. ನೀವೂ ಬಂದುಬಿಡಿ, ಪ್ರತಿಯೊಬ್ಬರಿಗೆ ತಲಾ 25 ಕೋಟಿ ರೂ. ಕೊಡುತ್ತೇವೆ. ಜೊತೆಗೆ ಬಿಜೆಪಿಯಿಂದ ಟಿಕೆಟ್ ನೀಡುತ್ತೇವೆ ಎಂದು ಆಮಿಷ ತೋರಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕಳೆದ 9 ವರ್ಷಗಳಿಂದ ನಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳು ನಡೆಯುತ್ತಲೇ ಇದೆ. ಅಬಕಾರಿ ಅಕ್ರಮ ಹಗರಣದಲ್ಲಿ ಸಿಲುಕಿಸಿ ಬಂಧಿಸಲು ಯತ್ನ ನಡೆಸಲಾಗಿತ್ತು. ಆಜಕೆ. ಆ ಪ್ರಯತ್ನ ವಿಫಲವಾಯಿತು. ದೇವರು ಮತ್ತು ಜನತೆ ಎಂದಿಗೂ ನಮ್ಮೊಂದಿಗಿದ್ದಾರೆ. ಹೀಗಾಗಿ ಅವರ ಇದುವರೆಗಿನ ಪ್ರಯತ್ನ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ದೆಹಲಿ ಜನತೆ ಆಮ್ ಆದ್ಮಿ ಪಕ್ಷದ ಮೇಲೆ ಅಪಾರ ವಿಶ್ವಾಸ ಮತ್ತು ಪ್ರೀತಿ ಹೊಂದಿದೆ. ದೆಹಲಿಯ ಒಳಿತಿಗಾಗಿ ಬಿಜೆಪಿ ಏನೂ ಮಾಡಿಲ್ಲ. ಹೀಗಾಗಿ ಬಿಜೆಪಿಯವರ ನಾಟಕವೆಲ್ಲಾ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.ಆದರೆ, ಕೇಜ್ರಿವಾಲ್ ಅವರ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದ್ದು, ಶಾಸಕರು ಹಾಗೂ ಆಮಿಷವೊಡ್ಡಿದ ನಾಯಕರ ಹೆಸರನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದೆ.

ಈ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ದೆಹಲಿ ಸಚಿವೆ ಅತಿಶಿ ಅವರು, ದೆಹಲಿಯಲ್ಲಿ ಬಿಜೆಪಿ `ಆಪರೇಷನ್ ಕಮಲ 2.0' ಆರಂಭಿಸಿದೆ. ಕಳೆದ ವರ್ಷ ಎಎಪಿ ಶಾಸಕರಿಗೆ ಹಣ ನೀಡುವ ಮೂಲಕ ಆಮಿಷವೊಡ್ಡಲಾಗಿತ್ತು. ಈ ಪ್ರಯತ್ನ ವಿಫಲವಾಗಿತ್ತು ಎಂದು ಹೇಳಿದ್ದಾರೆ.

ಈ ಆರೋಪವನ್ನು ತಳ್ಳಿಹಾಕಿದ ದೆಹಲಿ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ, ಆಮಿಷವೊಡ್ಡಿದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ. ಮದ್ಯ ಹಗರಣದಲ್ಲಿ ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗಬೇಕಿದ್ದು, ಈ ವಿಚಾರದಲ್ಲಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು