LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಂಪುಟ ವಿಸ್ತರಣೆಗೆ ದೆಹಲಿ ಪ್ರತಿಭಟನೆ ಅಡ್ಡಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದೆಹಲಿಯಲ್ಲಿ ನಡೆದಿರುವ ನೀಟ್ ಅಕ್ರಮದ ವಿರುದ್ಧದ ಪ್ರತಿಭಟನೆ ಅಡ್ಡಿ ಬಂದಿದೆ. ನಿನ್ನೆ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ನಾಯಕರು ಜತೆ ಮಾತನಾಡಲು ಮುಖ್ಯಮಂತ್ರಿ ಮಾಜಿ ಸಿಎಂ ಕೆಪಿಸಿಸಿ ಅಧ್ಯಕ್ಷರು ದೆಹಲಿಗೆ ತೆರಳಿದ್ದರು. ನಿನ್ನೆ ಮಧ್ಯಾಹ್ನದ ವೇಳೆಗೆ ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ನಿವಾಸದಲ್ಲಿ ಅವರೊಂದಿಗೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಳುತ್ತಿದ್ದಾಗ ನೀಟ್ ಅಕ್ರಮದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಅಡ್ಡಿಯಾಯಿತು. ನಿನ್ನೆ ತಡರಾತ್ರಿಯವರೆಗೂ ನಡೆದ ಪ್ರತಿಭಟನಾ ಹಿನ್ನೆಲೆಯಲ್ಲಿ ಯಾವುದೇ ಮಾತುಕತೆ ನಡೆಸಲು ಸಾಧ್ಯವಾಗಿಲ್ಲ. ಇಂದು ಸಹ ಇದೇ ವಿಷಯದ ಸಂಬಂಧ ಸಂಸತ್ ಒಳಗೂ ಹೊರಗೂ ಧರಣಿ ನಡೆಯುತ್ತಿರುವ ಪರಿಣಾಮ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಲು ಸಾಧ್ಯವಾಗಿಲ್ಲ. ಹಾಗಾಗಿ ರಾಜ್ಯದ ಮೂವರು ನಾಯಕರು ಯಾವುದೇ ಫಲಪ್ರದವಿಲ್ಲದೆ ಮಧ್ಯಾಹ್ನದ ವೇಳೆಗೆ ರಾಜ್ಯದತ್ತ ಹಿಂದಿರುಗಿದ್ದಾರೆ. ಮತ್ತೆ ಸಂಪುಟ ವಿಸ್ತರಣೆ ರಾಜ್ಯ ನಾಯಕರು ಹೈಕಮಾಂಡ್‌ನವರು ಕರೆದಾಗ ಹೋಗಲು ಸಿದ್ಧರಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ಕಾರ್ಯ ನೆನೆಗುದಿಗೆ ಬಿದ್ದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಸುಮಾರಿಗೆ ನೂತನ ಮಂತ್ರಿಗಳ ಪ್ರಮಾಣ ವಚನ ಸ್ವೀಕಾರಕ್ಕೆ ಲೋಕಭವನದಲ್ಲಿ ಸಿದ್ಧತೆ ಮಾಡಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು