LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅಸಮರ್ಥ ಅಧಿಕಾರಿಗಳ ಬದಲಾವಣೆಗೆ ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದ್ದು, ನಿನ್ನೆ ಬೆಳಗಿನ ಜಾವ ಅಂಜಲಿ ಎಂಬ ಯುವತಿಯನ್ನು ಕುಟುಂಬಸ್ಥರ ಮುಂದೆಯೇ ಭೀಕರವಾಗಿ ಯುವಕನೋರ್ವ ಹತ್ಯೆ ಮಾಡಿದ್ದಾನೆ. ನೇಹಾ ಹತ್ಯೆ ಇನ್ನು ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಕೊಲೆ ಆಗಿರುವುದು ಹುಬ್ಬಳ್ಳಿ ಧಾರವಾಡ ನಗರ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಲಾಗುತ್ತಿದೆ. ಇದೆಲ್ಲದರ ಮಧ್ಯೆ ಸರ್ಕಾರದ ವಿರುದ್ದ ಸ್ವ ಪಕ್ಷದ ಮುಖಂಡರಿಂದಲೇ ಅಸಮಾಧಾನ ವ್ಯಕ್ತವಾಗಿದ್ದು, ಹು-ಧಾ ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಅಧಿಕಾರಿಗಳ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ.ಈ ಕುರಿತಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.

ನೇಹಾ ಹಿರೇಮಠ ಕೊಲೆಯ ನಂತರ ಪೋಷಕರು ಭಯದ ವಾತಾವರಣದಲ್ಲಿದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ಅವಳಿ ನಗರಕ್ಕೆ ಖಡಕ್ ಅಧಿಕಾರಿಗಳ ನೇಮಕ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಲಾಗಿದೆ.ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹುಬ್ಬಳ್ಳಿಯಲ್ಲಿ ಅಪರಾಧ ಸಂಖ್ಯೆ ಹೆಚ್ಚುತ್ತಿದ್ದು, ಅವಳಿನಗರದ ಪೊಲೀಸ್ ವೈಫಲ್ಯದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ.

ಕಾರಣ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಬೇಕು ಎಂದು ಕೇಳಿಕೊಳ್ಳಲಾಗಿದೆ.ಕುಮಾರಿ ನೇಹಾ ಹಿರೇಮಠ ಸಾವಿನ ನಂತರ ವಿದ್ಯಾಭ್ಯಾಸ, ಉದ್ಯೋಗಗಳಿಗೆ ಹೆಣ್ಣು ಮಕ್ಕಳನ್ನು ಕಳುಹಿಸಲು ಪಾಲಕರು ಹಾಗೂ ಕುಟುಂಬಸ್ಥರು ಹಿಂಜರಿಯುವ ಸಮಯ ಇಲ್ಲಿ ನಿರ್ಮಾಣವಾಗಿದ್ದು, ಪದೇ ಪದೇ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವತಿಯರ ಕೊಲೆ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳು ಮತ್ತಷ್ಟು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ನಿರ್ಮಾಣವಾಗಿದೆ.

ಮುಖ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ರೌಡಿಗಳನ್ನು ಮಟ್ಟ ಹಾಕುವಲ್ಲಿ, ಪುಂಡು ಪೊಕರಿಗಳನ್ನು ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದು ಶೀಘ್ರವೇ ಅವಳಿನಗರಕ್ಕೆ ಖಡಕ್ ಅಧಿಕಾರಿಗಳನ್ನು ನೇಮಕ ಮಾಡಿ ಕಾನೂನು ಸುವವ್ಯಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು