LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಯಣ್ಣ ಶೆಡ್‍ನಲ್ಲಿ ಜಪ್ತಿಯಾಗಿರುವ ವಾಹನಗಳ ಬಿಡುಗಡೆಗೆ ಆಗ್ರಹ

ಬೆಂಗಳೂರು: ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿರುವ ಜಯಣ್ಣ ಶೆಡ್‍ನಲ್ಲಿ ಇರುವ ಜಪ್ತಿ ವಾಹನಗಳ ಬಿಡುಗಡೆ ವಿಚಾರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಧ್ಯಪ್ರವೇಶಿಸಿ ಚಾಲಕರು ಹಾಗೂ ಮಾಲೀಕರಿಗೆ ಆಗಿರುವ ತೊಂದರೆ ಸರಿಪಡಿಸಬೇಕು ಎಂದು ಇಂಡಿಯನ್ ವೆಹಿಕಲ್ಸ ಡ್ರೈವಸರ್ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.

ದರ್ಶನ್ ಪ್ರಕರಣದ ನಂತರ ಪಟ್ಟಣಗೆರೆ ಜಯಣ್ಣ ಶೆಡ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದರಿಂದ ಚಾಲಕರು ಹಾಗೂ ಮಾಲೀಕರಿಗೆ ತಮ ವಾಹನಗಳನ್ನು ಬಿಡಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ ಚಾಲಕರು ಸಂಕಷ್ಟಕ್ಕೆ ಈಡಾಗಿದ್ದಾರೆ ಹೀಗಾಗಿ ಕೂಡಲೆ ಸಚಿವರುಗಳು ಮಧ್ಯಪ್ರವೇಶಿಸಿ ಆಗಿರುವ ತೊಂದರೆ ತಪ್ಪಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಫೈನಾನ್ಸ್ ಹಾಗೂ ಇಎಂಐ ಕಟ್ಟಲು ಸಾಧ್ಯವಾಗದ ಬಸಗಳು, ಲಾರಿಗಳು, ಕಾರುಗಳು ಹಾಗೂ ಹಳದಿ ಬೋರ್ಡ್‍ನ ಕ್ಯಾಬ್‍ಗಳು ಸೇರಿದಂತೆ ಸಾವಿರಾರು ವಾಹನಗಳನ್ನು ಬ್ಯಾಂಕ್ ನವರು ಜಫ್ತಿ ಮಾಡಿ ಜಯಣ್ಣ ಶೆಡ್‍ನಲ್ಲಿ ನಿಲ್ಲಿಸಿದ್ದಾರೆ.ಬ್ಯಾಂಕ್‍ಗೆ ಹಣ ಪಾವತಿಸಿ ಚಾಲಕರು ಹಾಗೂ ಮಾಲೀಕರು ತಮ ವಾಹನಗಳನ್ನು ಬಿಡಿಸಿಕೊಂಡು ಹೋಗುವುದು ವಾಡಿಕೆಯಾಗಿತ್ತು. ಆದರೆ, ದರ್ಶನ್ ಪ್ರಕರಣದ ನಂತರ ಶೆಡ್ ಬಳಿಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಮುಂದಾಗಿರುವ ಚಾಲಕರು ಹಾಗೂ ಮಾಲೀಕರುಗಳಿಗೆ ಪೊಲೀಸರು ಅವಕಾಶ ನೀಡುತ್ತಿಲ್ಲ.

ಈಗಾಗಲೇ ಸಾಲ ಸೋಲ ಮಾಡಿ ತಮ ವಾಹನಗಳ ಮೇಲಿನ ಫೈನಾನ್ಸ್ ಪಾವತಿಸಿ ವಾಹನ ಬಿಡಿಸಿಕೊಂಡು ತಮ ಕಾಯಕ ಮುಂದುವರೆಸುವ ಮೂಲಕ ಜೀವನ ಸಾಗಿಸೋಣ ಎಂದು ನಂಬಿಕೊಂಡಿರುವ ಚಾಲಕರಿಗೆ ಪೊಲೀಸರ ವರ್ತನೆಯಿಂದ ತೀವ್ರ ತೊಂದರೆಯಾಗಿದೆ ಹಾಗಾಗಿ ಗೃಹ ಮಂತ್ರಿ ಹಾಗೂ ಸಾರಿಗೆ ಸಚಿವ ಮದ್ಯ ಪ್ರವೇಶ ಮಾಡಿ ಚಾಲಕರ ಮತ್ತು ಮಾಲೀಕರ ಸಂಕಷ್ಟ ಪರಿಹರಿಸ ಬೇಕು.

ಇನ್ನು ಕೆಲವು ದಿನಗಳ ಕಾಲ ಶೆಡ್‍ನಲ್ಲಿರುವ ವಾಹನಗಳನ್ನು ಬಿಡುಗಡೆ ಮಾಡದಿದ್ದರೆ ನೂರಾರು ಚಾಲಕರು ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಳ್ಳುವ ಪರಿಸ್ಥಿತಿ ಬರುವ ಸಾಧ್ಯತೆ ಇದೆ . ಹೀಗಾಗಿ ಸಚಿವರುಗಳು ಚಾಲಕರಿಗೆ ಆಗುತ್ತಿರುವ ಈ ಗಂಭೀರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಗಂಡಸಿ ಸದಾನಂದಸ್ವಾಮಿ ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು