LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದೇಗುಲ ಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿಗೆ ನಿರಾಕರಣೆ

ಕಾರ್ಯಕರ್ತರಿಂದ ದೇವಾಲಯಕ್ಕೆ ಬೀಗ


ರಾಮನಗರ: ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇಗುಲ ಪ್ರವೇಶ ನಿರಾಕರಣೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.ನಿಖಿಲ್ ಕುಮಾರಸ್ವಾಮಿ ಅವರು ದೇಗುಲಕ್ಕೆ ಬರುತ್ತಿದ್ದಾರೆ ಎನ್ನುವ ವಿಷಯ ತಿಳಿದು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತನಿAದ ದೇವಾಲಯಕ್ಕೆ ಬೀಗ ಹಾಕಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಆರೋಪಿಸಿದ್ದಾರೆ.ಈ ಬೆಳವಣಿಗೆ ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ದಳದ ಕಾರ್ಯಕರ್ತರು 'ಕೈ' ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.ನಿನ್ನೆ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಆಗಿರೋ ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆ ದೇವಾಲಯಕ್ಕೆ ನಿಖಿಲ್ ಭೇಟಿ ಕೊಟ್ಟಿದ್ದರು. ಆದ್ರೆ ನಿಖಿಲ್ ಭೇಟಿ ವೇಳೆ ದೇವಾಲಯಕ್ಕೆ ಕಾಂಗ್ರೆಸ್‌ನ ಕಾರ್ಯಕರ್ತರು ಬೀಗ ಜಡಿದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ನಿಖಿಲ್ ಅವರು ದೇವರ ದರ್ಶನ ಪಡೆಯದೇ ವಾಪಸ್ಸ್ ತೆರಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೋನಿಯಾಗಾಂಧಿ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ದೇಗುಲ ಪ್ರವೇಶಕ್ಕೆ ನಿಖಿಲ್ ಕುಮಾರಸ್ವಾಮಿಗೆ ನಿರಾಕರಣೆಕಬೀರಾನಂದಾಶ್ರಮ ಜಾತ್ಯತೀತ ಶ್ರದ್ಧಾಭಕ್ತಿಯ ಕೇಂದ್ರವಾಗಿ ಬೆಳಸುವಲ್ಲಿ ಶ್ರೀಗಳ ಕೊಡುಗೆ ಅಪಾರಕಬೀರಾನಂದಾಶ್ರಮ ಜಾತ್ಯತೀತ ಶ್ರದ್ಧಾಭಕ್ತಿಯ ಕೇಂದ್ರವಾಗಿ ಬೆಳಸುವಲ್ಲಿ ಶ್ರೀಗಳ ಕೊಡುಗೆ ಅಪಾರಸಿಎಂ ಪೋಸ್ಟರ್ ಅಂಟಿಸುವ ಚಾಳಿ ಬಿಡಲಿಮಕ್ಕಳನ್ನು ಹೇಗೆ ಬೆಳೆಸಬೇಕುವರ್ಷವಿಡೀ ಸುಗಮ ಸಂಗೀತ ಶತಮಾನೋತ್ಸವ ತರಬೇತಿ ಕಾರ್ಯಾಗಾರ: ಡಾ.ಕಿಕ್ಕೇರಿ ಕೃಷ್ಣಮೂರ್ತಿ ಘೋಷಣೆಅರಣ್ಯ-ರೈತರ ಮಂಜೂರಾತಿ ಭೂಮಿ ಗೊಂದಲ ನಿವಾರಣೆಗೆ ಕ್ರಮ: ಜಿಲ್ಲಾಧಿಕಾರಿ ರವಿಕುಮಾರ್ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು: 89 ರನ್‌ಗಳಿಗೆ ಆಲೌಟ್ಮೋದಿ ಅವರಿಂದ ಚಾಮರಾಜನಗರ ಅಮೃತ ರೈಲು ನಿಲ್ದಾಣ ಉದ್ಘಾಟನೆ