LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

"ತಂಬಾಕು ಮುಕ್ತ ಯುವ ಅಭಿಯಾನ ೩.೦ಗೆ ಜಿಲ್ಲಾಧಿಕಾರಿ ರವಿ ಚಾಲನೆ"

ಕೋಲಾರ: ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ತಂಬಾಕು ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯ ಅನುಷ್ಠಾನದ ಕುರಿತಂತೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವತಿಯಿಂದ ಹಮ್ಮಿಕೊಂಡಿರುವ ತಂಬಾಕು ಮುಕ್ತ ಯುವ ಅಭಿಯಾನ ೩.೦ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶ್ರೀಎಂ.ಆರ್‌ರವಿ ರವರು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ತಂಬಾಕು ವ್ಯಸನಕ್ಕೆ ಒಳಗಾಗಿ ಜನರು ಅನೇಕ ಕಾಯಿಲೆಗಳಿಗೆ ತುತ್ತಾಗುವ ಮುಖಾಂತರ ಪ್ರತಿ ವರ್ಷ ಭಾರತದಲ್ಲಿ ೧೦ ಲಕ್ಷಕ್ಕಿಂತ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ, ತಂಬಾಕು ಸೇವನೆ ಮತ್ತು ಧೂಮಪಾನದಿಂದ ದೇಹದಲ್ಲಿ ಕ್ಯಾನ್ಸರ್‌ಕಾರಕ ಜೀವಕೋಶಗಳು ಉತ್ಪತ್ತಿಯಾಗುತ್ತಾ ಕ್ಯಾನ್ಸರ್ ಕಾಯಿಲೆಗಳಿಗೆ ಒಳಗಾಗುತ್ತಾರೆ.
ಈ ಕುರಿತು ಯುವಜನರಲ್ಲಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ೬೦ ದಿನಗಳ ತಂಬಾಕು ಮುಕ್ತ ಯುವ ಅಭಿಯಾನವನ್ನು ಆರಂಭಿಸಲಾಗಿದೆ. ಯುವಜನರು ತಂಬಾಕು ಸೇವನೆಯ ವ್ಯಸನಕ್ಕೆ ತುತ್ತಾಗುವುದನ್ನು ತಡೆಯುವುದು ಮತ್ತು ಈಗಾಗಲೇ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸಿರುವವರು ಈ ವ್ಯಸನವನ್ನು ಬಿಡಲು ಪ್ರೇರೇಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದಡಾ. ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ರವರು ತಂಬಾಕು ಉತ್ಪನ್ನಗಳ ಸೇವನೆಯಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಶೇ ೨೨% ಕ್ಯಾನ್ಸರ್ ರೋಗಗಳು ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟ್, ಗುಟ್ಕಾ, ಹನ್ಸ್, ಕಡ್ಡಿಪುಡಿ ಇತರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ. ಶೇ೭೧% ಶ್ವಾಸಕೋಶದ ಕ್ಯಾನ್ಸರ್ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿದೆ. ಆಧುನಿಕ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇಂತಹ ರೋಗಗಳಿಗೆ ತಂಬಾಕು ಉತ್ಪನ್ನಗಳ ಸೇವನೆ ಪ್ರಮುಖ ಕಾರಣವಾಗಿದೆ, ಆದ್ದರಿಂದ ಹದಿಹರೆಯದ ವಯಸ್ಸಿನ ಯುವಕರು/ವಿದ್ಯಾರ್ಥಿಗಳು ಜಾಗೃತರಾಗುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಕೋಟ್ಪಾಕಾಯ್ದೆ ೨೦೦೩ರ ತಿದ್ದುಪಡಿ ನಿಯಮಗಳನುಸಾರ ಹೊಸ ನಾಮಫಲಕವನ್ನು ಬಿಡುಗಡೆ ಮಾಡಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಶ್ರೀನಿವಾಸ್ ಜಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ|| ಚಾರಿಣಿ ಎಂ.ಎ, ಜಿಲ್ಲಾಮಲೇರಿಯಾ ನಿಯಂತ್ರಣ ಅಧಿಕಾರಿಗಳಾದ ಡಾ|| ರವಿ ಕುಮಾರ್ ಎಂ.ವಿ,ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ|| ಪ್ರಸನ್ನ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ|| ನಾರಾಯಣ ಸ್ವಾಮಿ, ಡಾ|| ರಮೇಶ್ ಬಾಬು, ಡಾ|| ಸುನೀಲ್, ಡಾ|| ಸುಗುಣ, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿಗಳಾದ ವೆಂಕಟಾ ಚಲಪತಿಎಸ್, ಕೆ.ಎಸ್.ಆರ್.ಟಿ.ಸಿ ಆಡಳಿತಾಧಿಕಾರಿಗಳಾದ ಶ್ರೀಮತಿ ಭಾಗ್ಯಲಕ್ಷಿö್ಮÃ ಎಂ.ವಿ, ಜಿಲ್ಲಾತಂಬಾಕು ನಿಯಂತ್ರಣಕೋಶದಜಿಲ್ಲಾ ಸಲಹೆಗಾರರಾದ ಮಹಮದ್ ಪಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು