LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೇವನಹಳ್ಳಿ ತಾ. ಭೂಸ್ವಾಧೀನ ವಿವಾದ: ರೈತ ಬಣಗಳೊಂದಿಗೆ ಸಚಿವದ್ವಯರ ಸಭೆ

ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ 2ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಭೂಸ್ವಾಧೀನದ ಪರ ಮತ್ತು ವಿರೋಧವಿರುವ ಎರಡೂ ಗುಂಪುಗಳ ರೈತರೊಂದಿಗೆ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಬುಧವಾರ ಖನಿಜ ಭವನದಲ್ಲಿ ಪ್ರತ್ಯೇಕ ಸಭೆಗಳು ನಡೆದವು.

ಎರಡೂ ಗುಂಪುಗಳ ಅಹವಾಲುಗಳನ್ನು ಆಲಿಸಿದ ಸಚಿವದ್ವಯರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.ಸರಕಾರವು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ದೇವನಹಳ್ಳಿ ತಾಲ್ಲೂಕಿನ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆಬಜೇನಹಳ್ಳಿ, ನೆಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮಟ್ಟಿಬಾರ್ಲು, ಮುದ್ದೇನಹಳ್ಳಿ, ಚನ್ನರಾಯಪಟ್ಟಣ, ಶೋತ್ರಿಯ ತೆಲ್ಲೂಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಿಗೆ ಸೇರಿದ 1777 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು 2021ರ ಆಗಸ್ಟ್ 30ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಆದರೆ ಸರಕಾರದ ಈ ನಿರ್ಧಾರಕ್ಕೆ ರೈತರ ಒಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮೇಲ್ಕಂಡ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತಿದೆ.ರೈತರ ಮತ್ತೊಂದು ಗುಂಪು, ಜಮೀನನ್ನು ಬಿಟ್ಟುಕೊಡಲು ತಯಾರಿದ್ದು, ಸ್ವಾಧೀನ ಪ್ರಕ್ರಿಯೆ ಮತ್ತು ಹೆಚ್ಚಿನ ಪರಿಹಾರ ಹಂಚಿಕೆ ಎರಡನ್ನೂ ತ್ವರಿತ ಗತಿಯಲ್ಲಿ ಮುಗಿಸುವಂತೆ ಕೇಳಿಕೊಳ್ಳುತ್ತಿದೆ. ಹೀಗೆ ಹಾಗೆಯೇ ಬಿಟ್ಟರೆ ತಮ್ಮದು ತ್ರಿಶಂಕು ಸ್ಥಿತಿಯಾಗಲಿದೆ ಎಂದು ಈ ಗುಂಪಿನವರು ಸಭೆಯಲ್ಲಿ ಅಲವತ್ತುಕೊಂಡರು.

ಸಭೆಗಳಲ್ಲಿ ಭೂಸ್ವಾಧೀನಕ್ಕೆ ವಿರುದ್ಧವಾಗಿರುವ ಗುಂಪಿನ ರೈತ ಮುಖಂಡರಾದ ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್ ಹಾಗೂ ಪರವಾಗಿರುವ ಗುಂಪಿನ ಮುಖಂಡ ಲಕ್ಷ್ಮೀನಾರಾಯಣ ನೇತೃತ್ವದ ರೈತರು ಭಾಗವಹಿಸಿದ್ದರು.ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು