LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸದ್ಯದಲ್ಲೇ ತೆರೆಗೆ ಬರಲಿದೆ ದೇವರಾಜ್ ಕುಮಾರ್ ನಿರ್ದೇಶನ, ನಿರ್ಮಾಣ, ನಟನೆಯ "ಆಯುಧ'

ದೇವರಾಜ್ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ " ಆಯುಧ " ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಇದೇ ವರ್ಷ ಅಥವಾ ಮುಂದಿನ ವರ್ಷದ ಆರಂಭದಲ್ಲಿ ತೆರೆಗೆ ಬರಲಿದೆ.

ದೇವರಾಜ್ ಕುಮಾರ್ ಅವರು ಸದ್ದಿಲ್ಲದೆ ಚಿತ್ರಿಕರಣ ಮುಗಿಸಿ ದೇವರಾಜ್ ಪಿಚ್ಚರ್ ಸ್ಟುಡಿಯೋ ಬ್ಯಾನರ್ ನಲ್ಲೇ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿರುವ ದೇವರಾಜ್ ಕುಮಾರ್ ನಾಯಕ ನಟನಾಗಿಯೂ ಕೂಡ ಕಾಣಿಸಿಕೊಂಡಿದ್ದಾರೆ.

ಹೊನ್ನಾವರ ಬೈಂದೂರು, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಾಲ್ಕು ಹಾಡುಗಳು ಹಾಗೂ ನಾಲ್ಕು ಸಾಹಸ ಸನ್ನಿವೇಶಗಳಿರುವ ಈ ಚಿತ್ರ ಆಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಡ್ರಾಮಾ ಚಿತ್ರವಾಗಿರುತ್ತದೆ. ಡೇಂಜರ್ ಜೋನ್, ನಿಶಬ್ದ ೨, ಅನುಷ್ಕಾ, ತಾಜ್ ಮಹಲ್ ೨ ಚಿತ್ರಗಳನ್ನು ನಿರ್ದೇಶಿಸಿರುವ
ದೇವರಾಜ್ ಕುಮಾರ್, ತಮ್ಮ ಐದನೇ ಚಿತ್ರವಾಗಿ "ಆಯುಧ" ಚಿತ್ರ ಚಿತ್ರವನ್ನು ನಿರ್ದೇಶಿಸಿದ್ದಾರೆ.

ದೇವರಾಜ್ ಕುಮಾರ್‌ಗೆ ನಾಯಕಿಯರಾಗಿ ಅಮೃತ ಹಾಗೂ ಸಂಹಿತ ವಿನ್ಯ ನಟಿಸಿದ್ದಾರೆ. ಖಳ ನಟ ರಘು ಹಾಗೂ ಸೂರಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸತೀಶ ಸ್ಟೀವನ್ ಸಂಗೀತ ನಿರ್ದೇಶನ, ವೀನಸ್ ಮೂರ್ತಿ ಛಾಯಾಗ್ರಹಣ, ಮನವರ್ಷಿ ನವಲಗುಂದ ಗೀತರಚನೆ, ಚಂದ್ರು ಬಂಡೆ ಸಾಹಸ ನಿರ್ದೇಶನ ಹಾಗೂ ವಿಜಯ್ ಎಂ ಕುಮಾರ್ & ಮಹೇಶ್ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಡಿಸೆಂಬರ್‌ನಲ್ಲಿ
ಅನಾವರಣವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು