LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಿ.4ಕ್ಕೆ `ದೇವಿ ಮಹಾತ್ಮೆ' ತೆರೆಗೆ


ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ದೇವಿ ಮಹಾತ್ಮೆ’ ಚಿತ್ರ ಡಿಸೆಂಬರ್ 4 ರಂದು  ತೆರೆಕಾಣಲಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಪ್ರತಿಷ್ಠಿತ ‘ಹೊಂಬಾಳೆ ಮ್ಯೂಸಿಕ್’ ಸಂಸ್ಥೆ ಪಡೆದುಕೊಂಡಿತ್ತು. ಇತ್ತೀಚೆಗಷ್ಟೇ ಹೊಂಬಾಳೆ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ‘ಎದೆ ಸುಡುತಿದೆ ಗಾಯ...’ ಹಾಡು ಸಿನಿಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.  ಮತ್ತೊಂದು ಪ್ರತಿಷ್ಠಿತ ಸಂಸ್ಥೆಯಾದ ‘ಕೆಆರ್‌ಜಿ ಸ್ಟುಡಿಯೋಸ್’ ಈ ಚಿತ್ರದ  ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಗೌಡ ಅವರು, “ನಮ್ಮ ಪ್ರೀತಿಯ ಸಹೋದರ ನಾಗರಾಜ ಸೋಮಯಾಜಿ ನಿರ್ದೇಶನದ ‘ದೇವಿ ಮಹಾತ್ಮೆ’ ಚಿತ್ರವನ್ನು ಕೆಆರ್‌ಜಿ ಸ್ಟುಡಿಯೋಸ್ ವತಿಯಿಂದ ಜಾಗತಿಕವಾಗಿ ಬಿಡುಗಡೆ ಮಾಡಲಾಗುತ್ತಿದೆ. ಡಿಸೆಂಬರ್ 4 ರಿಂದ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.ನಾಗರಾಜ ಸೋಮಯಾಜಿ ನಿರ್ದೇಶನದ ಈ ಚಿತ್ರಕ್ಕೆ ವಿದ್ಯಾ ಗಾಂಧಿರಾಜನ್ ಬಂಡವಾಳ ಹೂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST