LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಧರ್ಮಸ್ಥಳ ಬುರುಡೆ ಪ್ರಕರಣ ಮೂವರ ಗುರುತು ಆಓಂ ಪರೀಕ್ಷೆಯಿಂದ ದೃಢ

ಮಂಗಳೂರು: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬAಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿAದ ಸಂಗ್ರಹಿಸಿದ್ದ ಡಿಎನ್‌ಎ ಮಾದರಿಗಳನ್ನು ಅಸ್ಥಿಪಂಜರಗಳ ಡಿಎನ್‌ಎ ಜತೆ ಹೋಲಿಕೆ ಮಾಡಲಾಗಿತ್ತು. ಈ ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಡಿಎನ್‌ಎ ಕುಟುಂಬಸ್ಥರ ಮಾದರಿಗಳೊಂದಿಗೆ ಹೊಂದಾಣಿಕೆಯಾಗಿದೆ ಎಂದು ತಿಳಿದುಬಂದಿದೆ.ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರ ಪೈಕಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ (27) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಸೇರಿದ್ದಾರೆ. ಅಂದರೆ, ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ಪತ್ತೆಯಾದ ಮೂವರೂ ಪುರುಷರು ಎಂಬುದು ದೃಢಪಟ್ಟಿದೆ. ಇವರ ಪೈಕಿ ಅಯ್ಯಪ್ಪ ಮತ್ತು ಕೃಷ್ಣಪ್ಪ 70 ವರ್ಷ ಮೇಲ್ಪಟ್ಟವರಾಗಿದ್ದಾರೆ.
ಧರ್ಮಸ್ಥಳದ ಆಸುಪಾಸಿನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿತ್ತು. ಆದರೆ ಎಸ್‌ಐಟಿ ಉತ್ಖನನದ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವ ಮೂವರೂ ಪುರುಷರು ಎಂಬುದು ಇದೀಗ ತಿಳಿದುಬಂದಿದೆ. ಜುಲೈ 15ರಂದು ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿದ್ದ ವರದಿಯಲ್ಲಿ ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಡಿಎನ್‌ಎ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿದೆ.ಮೂವರ ಕುಟುಂಬಸ್ಥರ ಡಿಎನ್‌ಎ ಮಾದರಿಗಳನ್ನು ಪಡೆದು ನಡೆಸಿದ ಪರೀಕ್ಷೆಯಲ್ಲಿ ಅಸ್ಥಿಪಂಜರಗಳೊAದಿಗೆ ಹೊಂದಾಣಿಕೆ ಕಂಡುಬAದಿದೆ. ಎಸ್‌ಐಟಿಗೆ ಮನವಿ ಸಲ್ಲಿಸಿದಲ್ಲಿ, ಸಂಬಂಧಪಟ್ಟ ಕುಟುಂಬಸ್ಥರಿಗೆ ಅಸ್ಥಿಪಂಜರಗಳನ್ನು ಪಡೆಯಲು ಅವಕಾಶ ನೀಡಬಹುದು ಎಂದು ತಿಳಿದುಬಂದಿದೆ.ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವ ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ (70) ಅವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದರು. ಬಳಿಕ ಮನೆಗೆ ವಾಪಸ್ ಆಗಿರಲಿಲ್ಲ. ಈ ಸಂಬAಧ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಆದಿಶೇಷ ನಾರಾಯಣ (27) ಅವರು ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರು. 2013ರ ಅಕ್ಟೋಬರ್ 2ರಂದು ಮನೆಗೆ ವಾಪಸ್ ಬಂದು ಮೊಬೈಲ್ ಇಟ್ಟು ಬಳಿಕ ನಾಪತ್ತೆಯಾಗಿದ್ದರು. ಈ ಹಿಂದೆ ಪದೇಪದೆ ಮನೆ ಬಿಟ್ಟು ಹೋಗುತ್ತಿದ್ದ ಕಾರಣ, ಅವರು ಮರಳಿ ಬರುತ್ತಾರೆ ಎಂದು ಕುಟುಂಬಸ್ಥರು ಆರಂಭದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿರಲಿಲ್ಲ.ಇನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಅವರು ವಯಸ್ಸಿನ ಕಾರಣದಿಂದ ಮನೆಯಲ್ಲೇ ಇರುತ್ತಿದ್ದರು. 2024ರ ಅಕ್ಟೋಬರ್ 22ರಂದು ಏಕಾಏಕಿ ಮನೆಯಿಂದ ಹೊರಹೋದ ಅವರು ಬಳಿಕ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.ಹೀಗೆ ಮೂವರ ನಾಪತ್ತೆ ಪ್ರಕರಣಗಳ ಹಿನ್ನೆಲೆ ಇದೀಗ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರಗಳ ಡಿಎನ್‌ಎ ಜತೆ ಹೊಂದಾಣಿಕೆಯಾಗಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು