LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಧರ್ಮ ಕೀರ್ತಿರಾಜ್ ಅಭಿನಯದ "ಬುಲೆಟ್" ಚಿತ್ರ ತೆರೆಗೆ ಬರಲು ಸಿದ್ಧ

ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ "ಬುಲೆಟ್" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು ಮುಂತಾದ ಕಡೆ 45 ದಿನಗಳ ಚಿತ್ರೀಕರಣ ನಡೆದಿದೆ. ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.

ಬಾಲಿವುಡ್ ನಿರ್ದೇಶಕ ಹಾಗೂ ನಿರ್ಮಾಪಕ ಸತ್ಯಜಿತ್, "ಬುಲೆಟ್" ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಾಯಕನ ತಂದೆಯ ಪಾತ್ರದಲ್ಲೂ ಸತ್ಯಜಿತ್ ನಟಿಸಿದ್ದಾರೆ. ಕನ್ನಡದಲ್ಲಿ ಅವರಿಗೆ ಮೊದಲ ಚಿತ್ರ. ಇಶಾಕ್ ಕಾಝಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಧರ್ಮ ಕೀರ್ತಿರಾಜ್ ಅವರಿಗೆ ನಾಯಕಿಯಾಗಿ ಶ್ರೀಯಾ ಶುಕ್ಲ ಹಾಗೂ ಅಜಿತಾ ಅಭಿನಯಿಸಿದ್ದಾರೆ. ಹಿರಿಯ ನಟಿ ಭವ್ಯ ಸಹ ಮುಖ್ಯಪಾತ್ರದಲ್ಲಿದ್ದಾರೆ. ಬಾಲಿವುಡ್ ನ ಖ್ಯಾತ ನಟರಾದ ಅಮಿತಾಬ್ ಬಚ್ಚನ್, ಶಾರುಕ್ ಖಾನ್, ಅಮೀರ್ ಖಾನ್ ಮುಂತಾದವರ ಚಿತ್ರಗಳಲ್ಲಿ ನಟಿಸಿರುವ ಶಿವ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಅಧಿಕಾರಿ ಪಾತ್ರ ನಿರ್ವಹಿಸಿದ್ದಾರೆ.

ಇಶಾಕ್ ಕಾಝಿ, ಸತ್ಯಜಿತ್, ಮಾಸ್ಟರ್ ಸಿದ್ ಟೈನ್, ಶಿವ, ರಾಜ ದೀಪ್, ಕಿಲ್ಲರ್ ವೆಂಕಟೇಶ್, ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ."ಬುಲೆಟ್" ಚಿತ್ರಕ್ಕೆ ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿದೆ. ಮೂರು ಹಾಡುಗಳಿದ್ದು ರಾಜ್ ಭಾಸ್ಕರ್ ಸಂಗೀತ ನೀಡಿದ್ದಾರೆ. ಗುರುಪ್ರಸಾದ್ ಸಂಕಲನ ಹಾಗೂ ಅಲ್ಟಿಮೇಟ್ ಶಿವು, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ."ಬುಲೆಟ್" ಎಂದರೆ ವಾಹನವಲ್ಲ. ಬಂದೂಕಿನ ಒಳಗಿರುವ "ಬುಲೆಟ್" ಇದು ಎಂದು ಚಿತ್ರತಂಡ ಮಾಹಿತಿ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು