LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿದ್ಯಾರ್ಥಿಗಳನ್ನು ರಾಜಕೀಯಕ್ಕಾಗಿ ಬಳಸಬೇಡಿ ಕಾಂಗ್ರೆಸ್ ವಿರುದ್ಧ ಧರ್ಮೇಂದ್ರ ಪ್ರಧಾನ್ ಆರೋಪ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಸಂಸತ್ತಿನಲ್ಲಿ ಗೊಂದಲ ಸೃಷ್ಟಿಸಲು ವಿದ್ಯಾರ್ಥಿಗಳನ್ನು ಅಸ್ತçವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಧರ್ಮೇಂದ್ರ ಪ್ರಧಾನ್ ಖಂಡಿಸಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ನೀಟ್ ವಿಚಾರವಾಗಿ ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರೂ, ಕಾಂಗ್ರೆಸ್ ಪ್ರಜಾಸತ್ತಾತ್ಮಕ ಚರ್ಚೆಯನ್ನು ಬಿಟ್ಟು ರಾಜಕೀಯ ನಾಟಕಕ್ಕೆ ಆದ್ಯತೆ ನೀಡಿದೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಾವು ವಿದ್ಯಾರ್ಥಿಗಳಿಗೆ ಬರಿ ಘೋಷಣೆಗಳನ್ನು ನೀಡುವುದಲ್ಲ. ಅವರಿಗೆ ನಿಖರ ಉತ್ತರಗಳು, ಶೈಕ್ಷಣಿಕ ಸುಧಾರಣೆಗಳು ಮತ್ತು ಹೊಣೆಗಾರಿಕೆಯನ್ನು ತಲುಪಿಸುವ ಅಗತ್ಯವಿದೆ. ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಸಂಪೂರ್ಣ ಬದ್ಧವಾಗಿದೆ. ಪ್ರಧಾನಿ ನಿವಾಸದ ಎದುರು ಧರಣಿ ನಡೆಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದ್ದು, ಭದ್ರತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು