LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chitradurga

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನಗರ ಸಭೆಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹ

ಚಳ್ಳಕೆರೆ: ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲೀನರ್ಸ್, ಲೋಡರ್ಸ್, ಸಹಾಯಕರು ಹಾಗೂ ವಾಹನ ಚಾಲಕರು ಮತ್ತು ಹೊರಗುತ್ತಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ. ತಮ್ಮ ಕೆಲಸಗಳಿಗೆ ಹೋಗದೆ. ನಗರ ಸಭೆಯ ಕಚೇರಿ ಮುಂದೆ ಅನಿರ್ಧಿಷ್ಟ ಕಾಲ ಧರಣಿ ನಡೆಸಿದರು.

ಈ ಧರಣಿಯ ನೇತೃತ್ವವನ್ನು ವಹಿಸಿದ್ದ. ನಗರಸಭೆಯ ಲೋಡರ್ಸ್, ಕ್ಲೀನರ್ಸ್ ಸಹಾಯಕರ ಸಂಘದ ತಾಲ್ಲೂಕು ಅಧ್ಯಕ್ಷ ಪ್ರಸನ್ನ ಕುಮಾರ್ ಪತ್ರಕರ್ತ ರೊಂದಿಗೆ ಮಾತನಾಡಿ. ಕಾಂಗ್ರೆಸ್ ಸರ್ಕಾರವು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕರ್ತವ್ಯ ನಿರ್ವಹಿಸು ತ್ತಿರುವ. ಎಲ್ಲಾ ಹೊರಗುತ್ತಿಗೆ ನೌಕರರಾದ ಕ್ಲೀನರ್ಸ್, ಲೋಡರ್ಸ್ ಹಾಗೂ ಸಹಾಯಕರು ಮತ್ತು ವಾಹನ ಚಾಲಕರು ಇವರನ್ನು ಗುತ್ತಿಗೆ ಪದ್ಧತಿಯ ಬದಲು ನೇರ ವೇತನ ಪಾವತಿಗೆ ತರಬೇಕು.

1964 ಪೌರಆಡಳಿತೆ ಕಾಯ್ದೆ ಪ್ರಕಾರ ಇವರನ್ನು ಕಾರ್ಮಿಕರೆಂದು ಒಪ್ಪಿರುವುದರಿಂದ. ಹಾಲಿ ನೇಮಕಾತಿಯಲ್ಲಿ ಇವರಿಗೆ ಅವಕಾಶ ಕಲ್ಪಿಸಬೇಕು. ಮಾಸಿಕ 2000?ಸಾವಿರ ಸಂಕಷ್ಟ ಭತ್ಯೆಯನ್ನು ಸ್ವಚ್ಛತೆಯಲ್ಲಿ ತೊಡೆದುಕೊಂಡಿರುವ ಎಲ್ಲಾ ಕಾರ್ಮಿಕರಿಗೆ ವಿತ್ತರಿಸಬೇಕು.
ನಗರೋತ್ತಾನ ಯೋಜನೆ ಅಡಿಯಲ್ಲಿ ಕ್ಲೀನರ್ಸ್, ಲೀಡರ್ಸ್ ಹಾಗೂ ಸಹಾಯಕರು ಮತ್ತು ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರಿಗೆ ನಿವೇಶನ ಖರೀದಿಸಲು ಸಹಾಯಧನ ನೀಡಬೇಕು.

ರಾಜ್ಯದ ಎಲ್ಲಾ ಜಿಲ್ಲಾ ತಾಲೂಕುಗಳಲ್ಲಿ ಮೇಲ್ಕಂಡ ಬೇಡಿಕೆಗಳು ಈಡೇರಿಸಿದರು. ನಮ್ಮ ಚಳ್ಳಕೆರೆ ನಗರಸಭೆಯಲ್ಲಿ ಮಾತ್ರ ನಮ್ಮ ಬೇಡಿಕೆಗಳು ಈಡೇರಿಸಿರುವುದಿಲ್ಲ . ಅನೇಕ ಬಾರಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಸಾಹೇಬರನ್ನು ಭೇಟಿ ಮಾಡಿ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಕೊಟ್ಟಿರುತ್ತೇವೆ.

ಶಾಸಕರು ಈ ಸಂಬಂಧ ನಗರಸಭೆ ಪೌರಯುಕ್ತರಿಗೆ ಈ ಸಮಸ್ಯೆಯನ್ನು ಪರಿಶೀಲಿಸಿ ಬಗೆಹರಿಸಲು ಸೂಚಿಸಿದ್ದಾರೆ. ಆದರೆ ಪೌರಾಯುಕ್ತರನ್ನು ನಾವು ಕೇಳಿದರೆ. ಏನೇನೋ ಸಾಬೂಬ್ ಹೇಳಿ ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ ನಾವು ನಮ್ಮ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವವರೆಗೂ ಅನುರ್ದಿಷ್ಟಕಾಲ ಮುಷ್ಕರ ಮಾಡುತ್ತೇವೆ ಎಂದು ಹೇಳಿದರು.

ಈ ಮುಷ್ಕರದಲ್ಲಿ ಕಾರ್ಯದರ್ಶಿ ಹನುಮಂತರಾಯ, ನಗರಸಭೆ ಗುತ್ತಿಗೆ ವಾಹನ ಚಾಲಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ಕಾರ್ಮಿಕರಾದ ಮಂಜುನಾಥ್, ಕೆಂಪರಾಜು, ಪ್ರತಾಪ್, ರಾಜಶೇಖರ್,ರುದ್ರಮುನಿ, ವೀರೇಶ್, ರಾಜ, ಮಂಗಳಮ್ಮ ಉಮೇಶ್, ಆರಿಫ್, ಬಸುರಾಜ್ ಇತರೆ ಕಾರ್ಮಿಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು