LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಧೀರ ಭಗತ್ ರಾಯ್ ಹಾಡು ಬಿಡುಗಡೆ

ರಂಗಭೂಮಿ ಹಿನ್ನೆಲೆಯಿಂದ ಬಂದ ಎಷ್ಟೋ ಕಲಾವಿದರು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ.ಈಗ ಅದೇ ಹಾದಿಯಲ್ಲಿ ಸಾಗ್ತಿರುವವರು ರಾಕೇಶ್ ದಳವಾಯಿ. ಧೀರ ಭಗತ್ ರಾಯ್ ಚಿತ್ರದ ಮೂಲಕ ರಾಕೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕರ್ಣನ್ ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಏನು ಕರ್ಮ ಹಾಡು ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಈ ಕುರಿತು ಪ್ರತಿಕಾಗೋಷ್ಟಿ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ನಿರ್ದೇಶಕರಾದ ಕರ್ಣನ್.ಎಸ್, ಏನು ಕರ್ಮ ಸಾಂಗ್ ಗೆ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಹಾಡು 2 ಲಕ್ಷ ವೀಕ್ಷಣೆ ಕಂಡಿದ್ದು, ಖುಷಿ ಇದೆ. ಲಿರಿಕ್ಸ್ ಎಲ್ಲರಿಗೂ ಇಷ್ಟವಾಗುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಿದ್ದಾರೆ ಎಂದರು.

ನಾಯಕ ನಟ ರಾಕೇಶ್ ದಳವಾಯಿ ಮಾತನಾಡಿ. ನಾನು ಪರಿಪೂರ್ಣ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಧೀರ ಭಗತ್ ರಾಯ್. ಭಯ ಮತ್ತು ಜವಾಬ್ದಾರಿ ಎರಡನ್ನು ಒಟ್ಟಿಗೆ ಹಂಚಿಕೊಳ್ತಾ, ಎರಡು ವರ್ಷ ಧೀರ ಭಗತ್ ರಾಯ್ ಜೊತೆ ಜೀವಿಸಿದ್ದೇವೆ. ಹೆಣ್ಣು, ಪ್ರೀತಿ ಹಾಗೂ ಜವಾಬ್ದಾರಿಯನ್ನು ಏನೋ ಕರ್ಮ ಹಾಡಿನ ಮೂಲಕ ಹೇಳಿದ್ದೇವೆ. ನಾನು ಲಾಯರ್ ಪಾತ್ರ ಮಾಡಿದ್ದೇನೆ. ಅದು ಚಾಲೆಂಜಿಂಗ್ ವಿಷ್ಯ. ಕರ್ಣನ್ ಸರ್ ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಹೀರೋಯಿನ್ ಸಿನಿಮಾಗೆ ಹೊಸಬರು. ಅವರಿಗೆ ಚಿತ್ರ ಚಾಲೆಂಜ್ ಆಗಿತ್ತು ಎಂದರು.

ನಾಯಕಿ ಸುಚರಿತಾ ಸಹಾಯರಾಜ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ. ಹೀಗಾಗಿ ಟೆನ್ಷನ್ ಇದ್ದೇ ಇರುತ್ತದೆ. ನನ್ನ ಪಾತ್ರ ಸಾವಿತ್ರಿ ತುಂಬಾ ಸ್ಟ್ರಾಂಗ್ ಆಗಿ ಇದೆ. ನನ್ನಲ್ಲಿ ಸಾವಿತ್ರಿಯನ್ನು ಹೇಗೆ ಅಳವಡಿಸಿಕೊಳ್ಳುವುದು ಅನ್ನೋದನ್ನು ಥಿಂಕ್ ಮಾಡಿದೆ. ಅದಕ್ಕೆ ನಿರ್ದೇಶಕರು ಸಾಕಷ್ಟು ಸಪೋರ್ಟ್ ಮಾಡಿದರು. ಈ ಪಾತ್ರ ನೋಡಿದಾಗ ತುಂಬಾ ಜನಕ್ಕೆ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದರು.
ಪೂರ್ಣ ಚಂದ್ರ ತೇಜಸ್ವಿ ಪದ ಪೊಣಿಸಿ ಟ್ಯೂನ್ ಹಾಕಿರುವ ಗಾನಲಹರಿಗೆ ವಿಜಯ್ ಪ್ರಕಾಶ್ ಹಾಗೂ ಸಾಕ್ಷಿ ಕಲ್ಲೂರ್ ಧ್ವನಿ ಹಾಡಿನ ತೂಕ ಹೆಚ್ಚಿಸಿದೆ. ಮನಮೋಹಕವಾಗಿರುವ ಈ ಸಾಂಗ್ ನಲ್ಲಿ ರಾಕೇಶ್ ಹಾಗೂ ಸುಚರಿತ ಕಾಣಿಸಿಕೊಂಡಿದ್ದಾರೆ.

ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ಧೀರ ಭಗತ್ ರಾಯ್. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟದ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಹಿನ್ನೆಲೆಯ ರಾಕೇಶ್ ಮತ್ತು ಸುಚರಿತಾ ಸಹಾಯರಾಜ್ ನಾಯಕ ಮತ್ತು ನಾಯಕಿಯಾಗಿ ನಟಿಸುತ್ತಿದ್ದಾರೆ.

ಶರತ್ ಲೋಹಿತಾಶ್ವ ಖಳನಟನ ಪಾತ್ರಕ್ಕೆ ಬಣ್ಣಹಚ್ಚಿದ್ದು, ಪ್ರವೀಣ್ ಹಗಡೂರು, ಮಠ ಕೊಪ್ಪಳ, ಸುಧೀರ್ ಕುಮಾರ್ ಮುರೊಳ್ಳಿ, ಶಶಿಕುಮಾರ್, ಫಾರೂಕ್ ಅಹ್ಮದ್, ಚಂದ್ರಿಕಾ ಗೌಡ, ನಯನ, ಸಿದ್ದಾರ್ಥ್ ಗೋವಿಂದ್, ಅನಿಲ್ ಹೊಸಕೊಪ್ಪ, ಪ್ರೊಫೇಸರ್ ಹರಿರಾಮ್, ಪಿ ಮೂರ್ತಿ, ಹೆಮಾನುಷ್ ಗೌಡ, ರಮೇಶ್ ಕುಮಾರ್, ಸಂದೇಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಶ್ರೀ ಓಂ ಸಿನಿ ಎಂಟರ್ಟೈನರ್ಸ್ ಹಾಗೂ ವೈಟ್ ಲೋಟಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಎಂ.ಸೆಲ್ವಂ ಜಾನ್ ಛಾಯಾಗ್ರಹಣ, ವಿಶ್ವ ಎನ್.ಎಂ ಸಂಕಲನ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು