LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಧೋನಿ ಜೆರ್ಸಿ `7'ಪೋಷಾಕಿಗೆ ನಿವೃತ್ತಿ

ನವದೆಹಲಿ: ವಿಶ್ವಕಪ್ ವಿಜೇತ ಭಾರತ ತಂಡದ ನಾಯಕರಾಗಿದ್ದ ಮಹೇಂದ್ರಸಿಂಗ್ ಧೋನಿ ಅವರು ಧರಿಸುತ್ತಿದ್ದ ‘7’ ಸಂಖ್ಯೆಯ ಪೋಷಾಕಿಗೆ ‘ವಿಶ್ರಾಂತಿ’ ಘೋಷಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧರಿಸಿದೆ.

ಧೋನಿಯ ಸಾಧನೆಗಳನ್ನು ಗುರುತಿಸಿ ಗೌರವಾರ್ಥವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದರೊಂದಿಗೆ ಇನ್ನು ಮುಂದೆ ಬೇರೆ ಯಾವುದೇ ಕ್ರಿಕೆಟಿಗನೂ ಈ ಸಂಖ್ಯೆಯ ಪೋಷಾಕನ್ನು ಧರಿಸುವಂತಿಲ್ಲ.ಧೋನಿ 2019ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಆಡಿದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಕಣಕ್ಕಿಳಿದಿರಲಿಲ್ಲ. 2020ರ ಆಗಸ್ಟ್ 15ರಂದು ಅವರು ನಿವೃತ್ತಿ ಘೋಷಿಸಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಾಯಕರಾಗಿ ಮುಂದುವರಿದಿದ್ದಾರೆ.

ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು 2013ರಲ್ಲಿ ನಿವೃತ್ತರಾಗಿದ್ದರು. ಅವರು 10 ಸಂಖ್ಯೆಯ ಪೋಷಾಕು ಧರಿಸುತ್ತಿದ್ದರು. ಅವರ ನಿವೃತ್ತಿಯ ನಂತರ ಯಾರೂ ಈ ಸಂಖ್ಯೆಯ ಜೆರ್ಸಿ ಧರಿಸಿರಲಿಲ್ಲ. ಆದರೆ, 2017ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ಶಾರ್ದೂಲ್ ಠಾಕೂರ್ ಕೂಡ ಇದೇ ಸಂಖ್ಯೆಯ ಪೋಷಾಕು ಧರಿಸಿದ್ದರು. ಆಗ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಆಗ ಅವರ ಜೆರ್ಸಿಗೆ (10) ವಿಶ್ರಾಂತಿ ನೀಡಿ ಗೌರವಿಸಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು