LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಪ್ಪ-ಮಗಳ 'ಸಿ'ಗೆ ಧ್ರುವ ಸಾಥ್

'ಸಿ' ಅಂತಿದ್ದಾರೆ ಧ್ರುವ ಸರ್ಜಾ: ಇದು ಅಪ್ಪ- ಮಗಳ ಕಥೆ ಹಾಡಿನ ಮೂಲಕ ಬಂದ 'ಸಿ'ಗೆ ಧ್ರುವ ಸರ್ಜಾ ಸಾಥ್ಸಿ..ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದಿವಿ ಅಂತನೂ ಅಂದ್ಕೊಬೇಡಿ... 'ಸಿ' ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನ ವನದಲ್ಲಿ ಶ್..ಸೈ..ಎ..ಓಂ...ಹೀಗೆ ಒಂದೇ ಅಕ್ಷರದ ಹೆಸರಿನ ಮೂವಿಗಳನ್ನು ನೋಡಿದ್ದೀರಾ, ಇದೀಗ ಅದೇ ಸಾಲಿಗೆ 'ಸಿ' ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ..

ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ 'ಸಿ' ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ 'ಸಿ' ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. 'ಸಿ' ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡರೆ ಮಗಳಾಗಿ ಮಿಂಚಿದ್ದಾಳೆ.

ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜೊತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ಕಂದಾ...ಕಂದಾ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ. ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜೊತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್  ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣಮಾಡಿದ್ದಾರೆ. ಈಗಾಲೇ ಹಾಡಿನ ಮೂಲಕ ಗಮನ ಸೆಳೆಯುತ್ತಿರುವ ಸಿ ಸಿನಿಮಡ ಜುಲೈ12ಕ್ಕೆ ರಿಲೀಸ್ ಆಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು