LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜೂ.21 ರಂದು ಧ್ರುವ ಸರ್ಜಾ ಅಭಿನಯದ "ಬಹದ್ದೂರ್" ರೀ ರಿಲೀಸ್

ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ "ಬಹದ್ದೂರ್" ಚಿತ್ರ 2014 ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಚಿತ್ರ ಮರು ಬಿಡುಗಡೆಯಾಗುತ್ತಿದೆ.

ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಚಿತ್ರವನ್ನು ರೀ ರಿಲೀಸ್ ಮಾಡುತ್ತಿದ್ದಾರೆ."ಬಹದ್ದೂರ್" ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಧ್ವನಿ ನೀಡಿದ್ದರು. ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ "ಬಹದ್ದೂರ್". ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಹಾರೈಸಿದ್ದರು.

ಪುನೀತ್ ರಾಜಕುಮಾರ್ ಅವರೆ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಇಂದಿಗೂ ಜನಪ್ರಿಯ. "ಬಹದ್ದೂರ್ " ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ನೂರಾರೂ ಸಲ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದೆ. ಈ ಚಿತ್ರ ಪ್ರಸಾರವಾದಗಲೆಲ್ಲ ಉತ್ತಮ ಟಿ.ಆರ್.ಪಿ ಬರುತ್ತಿರುವುದು ವಿಶೇಷ. ಧ್ರುವ ಸರ್ಜಾ ಹಾಗು ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾ ಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು