LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐಪಿಎಲ್ ಮಾಧ್ಯಮ ಹಕ್ಕುಗಳ ಮೌಲ್ಯ 4 ಲಕ್ಷ ಕೋಟಿ ರೂ.: ಧುಮಾಲ್ ಆಶಯ

ಬೆಂಗಳೂರು: ಮುಂದಿನ ಎರಡು ದಶಕಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಮಾಧ್ಯಮ ಹಕ್ಕುಗಳ ಮೌಲ್ಯವು ಮುಂದಿನ ಎರಡು ದಶಕಗಳಲ್ಲಿ 4 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಐಪಿಎಲ್ ಆಡಳಿತ ಸಮಿತಿ ಮುಖ್ಯಸ್ಥ ಅರುಣ್ ಧುಮಾಲ್ ಅಂದಾಜಿಸಿದ್ದಾರೆ. 2022ರಿಂದ ಐದು ವರ್ಷಗಳ ಅವಧಿಯ ಮಾಧ್ಯಮ ಹಕ್ಕುಗಳು 48 ಸಾವಿರ ಕೋಟಿಗೆ ಮಾರಾಟವಾಗಿದ್ದವು.

‘ಐಪಿಎಲ್ ದಿನದಿಂದ ದಿನಕ್ಕೆ ಹೊಸತನಗಳನ್ನು ಮೈಗೂಡಿಸಿಕೊಂಡು ಪ್ರೇಕ್ಷಕರನ್ನು ಸತತವಾಗಿ ಹಿಡಿದಿಟ್ಟುಕೊಂಡರೆ ಮಾತ್ರ ಮೌಲ್ಯವು ಹೆಚ್ಚಲಿದೆ. ಈಗಾಗಲೇ 15 ವರ್ಷಗಳಿಂದ ಐಪಿಎಲ್ ಜನಮಾನಸದಲ್ಲಿ ಅಚ್ಚೊತ್ತಿದೆ. ಆದ್ದರಿಂದ 2043ರ ವೇಳೆಗೆ ಇದು ಮೌಲ್ಯವು ಗಗನಮುಖಿಯಾಗುವ ಭರವಸೆ ಇದೆ’ ಎಂದು ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍ಸಿಬಿ) ಇನ್ನೋವೆಷನ್ ಲ್ಯಾಬ್ ಲೀಡರ್ಸ್ ಕೂಟದಲ್ಲಿ ಹೇಳಿದರು.

‘ಕ್ರಿಕೆಟ್ ಅಭಿಮಾನಿಗಳನ್ನು ಒಳಗೊಳ್ಳುವಿಕೆಯ ಪ್ರಕ್ರಿಯೆಯನ್ನು ನಾವು ನಿರಂತರವಾಗಿ ನಡೆಸಬೇಕು. ಪಂದ್ಯಗಳ ಗುಣಮಟ್ಟ ಸುಧಾರಣೆ ಮಾಡುತ್ತಲೇ ಸಾಗಬೇಕು’ ಎಂದು ಅಭಿಪ್ರಾಯಪಟ್ಟರು.‘ಇದೀಗ ಕ್ರಿಕೆಟ್ ಒಲಿಂಪಿಕ್ ಕೂಟಕ್ಕೂ ಸೇರ್ಪಡೆಯಾಗುತ್ತಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕೂಟದಲ್ಲಿ ಮಹಿಳಾ ಕ್ರಿಕೆಟ್ ನಡೆಯಲಿದೆ. ಇದರಿಂದಾಗಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟೂರ್ನಿಯ ಗುಣಮಟ್ಟ ಉತ್ತಮವಾಗಲಿದೆ’ ಎಂದು ಧುಮಾಲ್ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು