LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಟೀಸರ್‍ನಲ್ಲೇ ಮೋಡಿಮಾಡಿದ "ದಿಲ್ ಖುಷ್"

ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಡಾರ್ಲಿಂಗ್ ಕೃಷ್ಣ .ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಜೊತೆಗೆ ನವೀರಾದ ಪ್ರೇಮಕಥೆಯ, ಪ್ರಮೋದ್ ಜಯ ನಿರ್ದೇಶಿಸಿರುವ "ದಿಲ್ ಖುಷ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. "ದಿಲ್ ಖುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ, ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. "ದಿಲ್ ಖುಷ್" ಎಂದರೆ ನಾಯಕ - ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ.

ಯುವಪ್ರತಿಭೆ ರಂಜಿತ್ "ದಿಲ್ ಖುಷ್" ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು, ಸೂರ್ಯ ಪ್ರವೀಣ್ ಮುಂತಾದವರು ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ.

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದೆ. ನಿವಾಸ್ ನಾರಾಯಣ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು