LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಶ್ರೇಯಸ್ ಮಂಜು ಅವರಿಗೆ ದಿಲ್‌ದಾರ್ ಬರ್ತ್ಡೇ ಟೀಸರ್ ಉಡುಗೊರೆ!

ಪಡ್ಡೆಹುಲಿಯಾಗಿ ಪ್ರೇಕ್ಷಕರನ್ನೆಲ್ಲ ಸೆಳೆದುಕೊಂಡಿರುವ ಶ್ರೇಯಸ್ ಮಂಜು ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅದಕ್ಕೆ ಉಡುಗೊರೆ ಎಂಬAತೆ ದಿಲ್‌ದಾರ್ ಚಿತ್ರತಂಡ ಬರ್ತ್ಡೇ ಟೀಸರ್ ಬಿಡುಗಡೆಗೊಳಿಸಿದೆ. ಆರಂಭದಿAದಲೂ ಆಕ್ಷನ್ ಲುಕ್ಕಲ್ಲಿ ಮಿಂಚುತ್ತಾ ಬಂದಿರುವ ಶ್ರೇಯಸ್ ಮಂಜು, ಸದರಿ ಟೀಸರ್‌ನಲ್ಲಿ ಮತ್ತೊಂದು ಮಟ್ಟದ ಆಕ್ಷನ್ ಅವತಾರದಲ್ಲಿ ವಿಜೃಂಭಿಸಿದ್ದಾರೆ. ಈ ಟೀಸರ್‌ಗೀಗ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ದಿಲ್‌ದಾರ್ ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದೀಗ ಬಹತೇಕ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಯ ಸನ್ನಾಹದಲ್ಲಿದೆ. ಈ ಸಿನಿಮಾ ಈವತ್ತಿನ ಹೊಸ ತಲೆಮಾರಿಗೆ ನೇರಾನೇರ ಹೊಂದಿಕೆಯಾಗುವAಥಾ ವಿಶಿಷ್ಟ ಕಥೆಯನ್ನೊಳಗೊಂಡಿದೆ ಎಂಬುದು ನಿರ್ದೇಶಕರ ಮಾತು. ಈ ಬರ್ತ್ಡೇ ಟೀಸರ್ ಮೂಲಕ ಒಟ್ಟಾರೆ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ನಾಯಕ ಶ್ರೇಯಸ್ ಮಂಜು ಅವರ ಖಡಕ್ ಲುಕ್ ಸ್ಪಷ್ಟವಾಗಿಯೇ ಅನಾವರಣಗೊಂಡಿದೆ.
ಏನ್ಸಿಯೆAಟ್ ಮೂವೀಸ್ ಬ್ಯಾನರ್‌ನಡಿಯಲ್ಲಿ ಡಾ.ಆರ್ ಸಂತೋಷ್ ಕುಮಾರ್ (ಎಸ್‌ವಿಟಿ) ದಿಲ್‌ದಾರ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಈ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಈಗಾಲೇ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ, ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು