LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

"ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ"

ದಾವಣಗೆರೆ: ಸಮಾಜಕ್ಕೆ ಹಿರಿಯ ನಾಗರಿಕರ ಸಲಹೆ, ಸೂಚನೆ, ಮಾರ್ಗದರ್ಶನ ಅಗತ್ಯವಾಗಿದೆ. ಇಲ್ಲವಾದಲ್ಲಿ ಹಿರಿಯರ ಆದರ್ಶ ಮತ್ತು ಮೌಲ್ಯಗಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕಣ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸದ್ಯೋಜಾತ ಮಠದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು.

ಈಗಿನ ಮಕ್ಕಳಿಗೆ ಆದರ್ಶ, ಮೌಲ್ಯಯುತ ಸಲಹೆಗಳು ಅಗತ್ಯವಾಗಿ ಹೇಳಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಮುಖ್ಯವಾದದ್ದು ಹಿಂದೆ ಮನುಷ್ಯನ ಆಯಸ್ಸು ೧೦೦ ರಿಂದ ೧೨೫ ವರ್ಷಗಳಾಗಿತ್ತು, ಆದರೆ ಇಂದಿನ ಪೀಳಿಗೆಯವರ ಆಯಸ್ಸು ೬೫ ರಿಂದ ಗರಿಷ್ಠ ೮೦ ವರ್ಷ ಆಗಿದೆ. ಹಿರಿಯ ನಾಗರಿಕರು ಯೋಚನೆ ಮಾಡುವುದನ್ನು ಬಿಡಬೇಕು, ಜೊತೆಗೆ ದಿನ ನಿತ್ಯದ ಬದುಕಿನಲ್ಲಿ ಕ್ರೀಡೆಯಲ್ಲಿ ತೊಡಕೊಳ್ಳಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು.

ಈ ಹಿಂದೆ ಯಾವುದೇ ಪೊಲೀಸರ ರಕ್ಷಣೆ ಇಲ್ಲದೆ ಹಬ್ಬ ಆಚರಣೆ ಮಾಡುತ್ತಿದ್ದೆವು, ಆದರೆ ಇಂದು ಪೊಲೀಸ್‌ರ ಮತ್ತು ಡ್ರೋಣ್ ಕಣ್ಗಾವಲಿನಲ್ಲಿ ಹಬ್ಬಗಳ ಆಚರಣೆ ಮಾಡುವಂತಾಗಿದೆ. ನಾವು ಸೌಹಾಧÀðತಯುತವಾಗಿ ಹಬ್ಬ ಆಚರಣೆ ಮಾಡುವ ವ್ಯವಸ್ಥೆ ಆಗಬೇಕು ಮತ್ತು ಸರ್ವರಿಗೂ ಶಿಕ್ಷಣ, ಆರೋಗ್ಯ ಸೇವೆ ಉಚಿತವಾಗಿ ನೀಡಿದಾಗ ಮಾತ್ರ ದೇಶ ಹೆಚ್ಚು ಅಭಿವೃದ್ದಿಯಾಗಲು ಸಾಧ್ಯ ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ಅವರು ಮಾತನಾಡಿ ಚಿಕ್ಕವರಿದ್ದಾಗ ಅಜ್ಜಿ, ತಾತ ಅವರುಗಳು ನಮಗೆ ಪಂಚತAತ್ರ, ರಾಮಾಯಣ ಮತ್ತು ಮಹಾಭಾರತ ಕಥೆಗಳನ್ನು ಹೇಳುತ್ತಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ಕೂಟಗಳಲ್ಲಿ ಮಕ್ಕಳೊಂದಿಗೆ ಭಾಗವಹಿಸುತ್ತಿದ್ದರು. ಇದರಿಂದ ಸಂಸ್ಕೃತಿ ಹೆಚ್ಚುತಿತ್ತು, ಆದರೆ ಇಂದು ಸಹಕುಟುಂಬ ವ್ಯವಸ್ಥೆಯಿಂದ ವಿಮುಖರಾಗಿ ವಯೋವೃದ್ದರನ್ನು ನೋಡಿಕೊಳ್ಳಲು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಆದರೆ ಹಿರಿಯರೊಂದಿಗೆ ಇಂದಿನ ಯುವ ಪಿಳಿಗೆಗೆ ಮಾರ್ಗದರ್ಶನ ಮುಖ್ಯವಾಗಿದೆ. ಹಿರಿಯರು ಜೊತೆಗೆ ಇಲ್ಲದ ಕಾರಣ ನಾವು ಏನು ಮಾಡಬೇಕು ಮತ್ತು ಮಾಡಬಾರದು ಎಂಬುದು ತಿಳಿ ಹೇಳುವವರು ಯಾರೂ ಇಲ್ಲವಂತಾಗಿದೆ. ಆದ್ದರಿಂದ ಹಿರಿಯರು ತಮ್ಮ ಜೀವನ ಭದ್ರತೆ, ಆರೋಗ್ಯ ಕಾಪಾಡಿಕೊಳ್ಳುವಂತೆ ತಿಳಿಸಿದರು.

ಹಿರಿಯ ವಕೀಲರಾದ ಬಳ್ಳಾರಿ ರೇವಣ್ಣ ರವರು ಕಾನೂನು ಅರಿವು ಬಗ್ಗೆ ಉಪನ್ಯಾಸ ನೀಡಿದರು. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮತ್ತು ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ.ಕೆ.ಕೆ.ಪ್ರಕಾಶ್, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಮೂರ್ತಿ, ಹಿರಿಯ ವೈದ್ಯರಾದ ಡಾ. ವೀರಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರಕುಮಾರ್ ಬಿ.ಯು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಹಾಗೂ ಇತರರು ಉಪಸ್ಥತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು