LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೃಜನ್ ಲೋಕೇಶ್ ನಿರ್ದೇಶನ "GST" ಈ ವಾರ ತೆರೆಗೆ

"GST" ಚಿತ್ರ ಹಲವು ವಿಶೇಷತೆಗಳನ್ನೊಳ ಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ.
ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ
ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ "GST" ಚಿತ್ರಕ್ಕೆ "ಘೋಸ್ಟ್ ಇನ್ ಟ್ರಬಲ್" ಎಂಬ ಅಡಿಬರಹವಿದೆ.

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ.ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ,
ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್  ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು