LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಂದಿನ ಕಾರ್ಯ ಯೋಜನೆ ಬಗ್ಗೆ ಚರ್ಚೆ

ಬೆಂಗಳೂರು: ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಪಕ್ಷದ ಸಂಘಟನೆ, ಬೆಳಗಾವಿ ಅಧಿವೇಶದಲ್ಲಿ ನಮ್ಮ ನಿಲುವು ಲೊಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ ಎಂದು ವಿಧಾನಸಭೆ ವಿಪಕ್ಷನಾಯಕರಾಗಿ ಆಯ್ಕೆಯಾಗಿರುವ ಆರ್. ಅಶೋಕ್ ಹೇಳಿದ್ದಾರೆ.

ಇಂದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿಮಾತುಕತೆ ನಡೆಸಿದ ನಂತರ ಸುದ್ದಿಗಾರ
ರೊಂದಿಗೆ ಮಾತನಾಡಿದ ಅವರು, ಇನ್ನರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ
ಮಾಡಲಾಗುವುದು.

ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೋಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಟಿಕಾಣಿ ಹೂಡಿರುವುದು. ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ ಮಾಡುತ್ತಿರುವುದು. ಟ್ರಾನ್ಸ್ ಫರ್ ದಂಧೆಯಲ್ಲಿ ತೊಡಗಿದ್ದು 60% ಪರ್ಸೆಂಟ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ.

ಶಾಸಕರಿಗೆ ಅನುದಾನ ನೀಡುತ್ತಿಲ್ಲ ಅವರು ಜನರ ಬಳಿ ಹೋಗುತ್ತಿಲ್ಲ. ಫ್ರಿ ಹೆಸರಿನಲ್ಲಿ ಹಣ ನೀಡುತ್ತಿರುವುದಾಗಿ ಹೇಳಿದ್ದಾರೆ ಆದರೆ ಆ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆಗೆ ಹೋಗುತ್ತಿದೆ. ಅವರ ಸರ್ಕಾರವನ್ನು ಕೆಡವೊಕೆ ನಾನ್ಯಾರು ಅವರ್ಯಾರು ಮುಖ್ಯವಲ್ಲ.

ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೊಯಿತು ಅಂತ ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ. ನಾವ್ಯಾಕೆ ಬೀಳಿಸಲ್ಲ. ಏನೂ ಇಲ್ಲ ಅಂದರೆ ಪರಮೇಶ್ವರ ತಮ್ಮ ಮನೆಯಲ್ಲಿ ಯಾಕೆ ಸಭೆ ಮಾಡಿದರು. ಪಕ್ಕದ ಮನೆಯಲ್ಲಿರುವ ಡಿಕೆಶಿ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ. ಜಮಿರ್ ಹೇಳಿಕೆ ಕುರಿತು ಅಧಿವೇಶನದಲ್ಲಿ ಮಾತನಾಡುತ್ತೇವೆ. ಅವರದು ಸಂವಿಧಾನ ವಿರೋಧಿ ನಡೆ. ಅದನ್ನು ಖಂಡಿಸಿದ್ದೇವೆ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಹೈಕಮಾಂಡ್ ಸೂಚನೆ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಉತ್ತರ ದಕ್ಷಿಣ ಕರ್ನಾಟಕ ಅಂತ ಇಲ್ಲ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ. ಎಲ್ಲರೂ ಸೇರಿ ಮೊದಿಯವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು