ಬೆಂಗಳೂರು: ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೀದರ್, ಉತ್ತರ ಕನ್ನಡ, ಗದಗ, ಯಾದಗಿರಿ ವಿಜಯಪುರ, ಧಾರವಾಡ ಮತ್ತು ಹಾಸನ ಸೇರಿದಂತೆ ಬಹುತೇಕ ಕಡೆ ಬಸ್, ಆಟೋ ಹಾಗೂ ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಮುಂದುವರಿದಿದ್ದು, ಅಂಗಡಿ-ಮುಂಗಟ್ಟುಗಳು ಕೂಡ ತೆರೆದಿವೆ.ಬೀದರ್ ಜಿಲ್ಲೆಯಲ್ಲಿ ಬಂದ್‌ಗೆ ಯಾವುದೇ ಪರಿಣಾಮ ಕಂಡುಬಂದಿಲ್ಲ. ಬಸ್, ಆಟೋ, ಖಾಸಗಿ ವಾಹನಗಳ ಸಂಚಾರ ಹಾಗೂ ವ್ಯಾಪಾರ-ವಹಿವಾಟು ಎಂದಿನಂತೆ ನಡೆಯುತ್ತಿದೆ. ಹೋಟೆಲ್‌ಗಳು ಕೂಡ ಎಂದಿನಂತೆ ತೆರೆದಿವೆ.ಉತ್ತರ ಕನ್ನಡ ಗಡಿ ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನ ಸಂಚಾರ ಸಹಜವಾಗಿದೆ. ಪ್ರಮುಖ ಸಂಘಟನೆಗಳಿಂದ ಬಂದ್‌ಗೆ ಬೆಂಬಲ ಸಿಕ್ಕಿಲ್ಲ.ಗದಗ ಜಿಲ್ಲೆಯಲ್ಲಿ ಬಂದ್‌ನ ಯಾವುದೇ ಪರಿಣಾಮ ಕಂಡುಬAದಿಲ್ಲ. ಅಂಗಡಿ-ಮುಂಗಟ್ಟುಗಳು, ವ್ಯಾಪಾರ-ವಹಿವಾಟು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಎಂದಿನಂತೆ ನಡೆದಿದೆ. ಯಾವುದೇ ಪ್ರಮುಖ ಪ್ರತಿಭಟನೆ ಕೂಡ ಕಂಡುಬಂದಿಲ್ಲ.
ಯಾದಗಿರಿಯಲ್ಲಿ ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜನಜೀವನ ಸಹಜವಾಗಿದೆ. ಬಸ್, ಆಟೋ ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದು, ಅಂಗಡಿ-ಮುಂಗಟ್ಟುಗಳು ತೆರೆದಿವೆ. ಶಾಲಾ-ಕಾಲೇಜುಗಳಿಗೂ ವಿದ್ಯಾರ್ಥಿಗಳು ಎಂದಿನಂತೆ ತೆರಳುತ್ತಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಬಂದ್‌ಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರಿಗೆ ಬಸ್‌ಗಳು ಹಾಗೂ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿದ್ದು, ಅಂಗಡಿ-ಮುಂಗಟ್ಟುಗಳು ತೆರೆದಿವೆ. ಬಂದ್ ಹಿನ್ನೆಲೆಯಲ್ಲಿ ಪ್ರಮುಖ ವೃತ್ತಗಳಲ್ಲಿ ಮಾತ್ರ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.ಧಾರವಾಡ ನಗರದಲ್ಲಿ ಕೂಡ ಬಂದ್‌ನ ಪರಿಣಾಮ ಕಾಣಿಸಲಿಲ್ಲ. ಬಸ್‌ಗಳು, ಖಾಸಗಿ ವಾಹನಗಳು ಹಾಗೂ ಜನರ ಸಂಚಾರ ಎಂದಿನAತೆ ಇದೆ. ಬಹುತೇಕ ಅಂಗಡಿ-ಮುಂಗಟ್ಟುಗಳು