LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಾಯಕ ಮೋಹನ್ ಕೃಷ್ಣ ಅವರಿಗೆ ಆದೇಶ ಪತ್ರ ವಿತರಣೆ

ಬೆಂಗಳೂರು: ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಾಂಸ್ಕೃತಿಕ ಹಾಗೂ ಕಲಾವಿದರ ಹಿತರಕ್ಷಣಾ ಸಮಿತಿಯ ಅಂತಾರಾಷ್ಟ್ರೀಯ ನಿರ್ದೇಶಕರಾಗಿ ಆಯ್ಕೆಯಾದ ಕೆ.ಜಿ.ಎಫ್. ಚಿತ್ರದ `ಸಲಾಂ ರಾಖಿ ಬಾಯ್' ಗೀತೆಯ ಮೂಲಕ ಜನಪ್ರಿಯತೆ ಗಳಿಸಿದ ಗಾಯಕ ಮೋಹನ್ ಕೃಷ್ಣರವರ ಪದಗ್ರಹಣ ಕಾರ್ಯಕ್ರಮ ಮಹಾಲಕ್ಷ್ಮಿ ಲೇಔಟ್ ಆರ್.ಜಿ.ಪ್ಯಾಲೇಸ್ ಹೋಟೆಲ್ ನಲ್ಲಿ ಅದ್ದೂರಿಯಾಗಿ ಜರುಗಿತು.

ಶ್ರೀಮತಿ ಕಾವ್ಯರವರು ಗೌರವದಿಂದ ರಾಷ್ಟ್ರಧ್ವಜವನ್ನು ವೇದಿಕೆಗೆ ತಂದರು. ಈ ಸಂದರ್ಭದಲ್ಲಿ ಎಲ್ಲರೂ ನಿಂತು ರಾಷ್ಟ್ರಗೀತೆ ಹಾಗೂ ನಾಡಗೀತೆ ಪ್ರಸ್ತುತ ಪಡಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಅನಂತರ ನಾದಬ್ರಹ್ಮ ಡಾ. ಹಂಸಲೇಖ ರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೋಹನ್ ಕೃಷ್ಣರವರಿಗೆ ಗೌರವ ಸನ್ಮಾನದೊಂದಿಗೆ ಡಾ. ಸಿ. ಸೋಮಶೇಖರ್ ಹಾಗೂ ಅಧ್ಯಕ್ಷ ಶಿವಕುಮಾರ್ ನಾಗರ ನವಿಲೆಯವರು ಆದೇಶ ಪತ್ರ ನೀಡುವ ಮೂಲಕ ಅಧಿಕಾರ ನೀಡಿದರು. ಈ ಸಂದರ್ಭದಲ್ಲಿ ದಿನೇಶ್ ಜೋಶಿಯವರು ಪ್ರಮಾಣ ವಚನ ಬೋಧಿಸಿದರು.ಅಧಿಕಾರ ಸ್ವೀಕರಿಸಿದ ಗಾಯಕ ಮೋಹನ್ ಪ್ರಾರ್ಥನ ಗೀತೆಯನ್ನ ಶ್ರೀಮತಿ ಎಂ. ಎಸ್. ಲೀಲಾವತಿಯವರು ಸ್ವಾಗತ ಭಾಷಣ ಗುಣವಂತ ಮಂಜುರವರು, ವಂದನಾರ್ಪಣೆಯನ್ನು ಮಂಜು ಪಾವಗಡರವರು ನೆರವೇರಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸಂಧ್ಯಾಭಟ್ ರವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಲಹರಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಲಹರಿವೇಲು, ಹಿರಿಯ ಸಾಹಿತಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ .ಎಸ್.ಜಿ. ಸಿದ್ದರಾಮಯ್ಯ, ರವಿಸಂತೋಷ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು