LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ಲಾಸ್ಟಿಕ್ ಪಾರದರ್ಶಕ ಪರೀಕ್ಷೆ ಪ್ಯಾಡ್ ಮತ್ತು ಶೈಕ್ಷಣಿಕ ಸಾಧನಗಳ ವಿತರಣೆ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ವರ್ಷಪೂರ್ತಿ ಓದಿರುವುದನ್ನೇ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಭಯ, ಆತಂಕ, ಉದ್ವೇಗಕ್ಕೆ ಒಳಗಾಗಬೇಡಿ ಎಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಘಟಕದ ಅಧ್ಯಕ್ಷ ರ. ನರಸಿಂಹ ಮೂರ್ತಿ ಕಿವಿಮಾತು ಹೇಳಿದರು.

ಬಸವೇಶ್ವರನಗರ ಕಾಮಾಕ್ಷಿಪಾಳ್ಯ ರಲ್ಲಿರುವ ಚೈತ್ರ ಸಂದೇಶ್ ಸ್ಟಡಿ ಸೆಂಟರ್‍ನಲ್ಲಿ ಅಪ್ಪು ಯುವ ಬ್ರಿಗೇಡ್ ಮತ್ತು ಕಸ್ತೂರಿ ಕನ್ನಡ ಡಾ ರಾಜ್ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಾರದ ಪೂಜಾ ಕಾರ್ಯಕ್ರಮ ಮತ್ತು ಎಸ್ಸೆಸ್ಸೆಲ್ಸಿ ಮಕ್ಕಳ ಬೀಳ್ಕೊಡುಗೆ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ಲಾಸ್ಟಿಕ್ ಪಾರದರ್ಶಕ ಪರೀಕ್ಷೆ ಪ್ಯಾಡ್ ಮತ್ತು ಶೈಕ್ಷಣಿಕ ಸಾಧನಗಳ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನೋತ್ಸವದ ಸವಿನೆನಪಿನಲ್ಲಿ ಅಪ್ಪು ಯುವ ಬ್ರಿಗೇಡ್ ನ ರಾಜ್ಯಾಧ್ಯಕ್ಷರಾದ ಮುರಳಿ ರವರ ಸಹಕಾರದಿಂದ ಕಸ್ತೂರಿ ಕನ್ನಡ ಡಾ.ರಾಜ್ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ವತಿಯಿಂದ ಪ್ಲಾಸ್ಟಿಕ್ ಪಾರದರ್ಶಕ ಪರೀಕ್ಷೆ ಪ್ಯಾಡ್ ಸ್ಟ್ರಾಂಗ್ ರೈಟಿಂಗ್ ಬೋರ್ಡ್ ಪರೀಕ್ಷೆ ಬರೆಯುವ ಪ್ಯಾಡ್‍ಗಳನ್ನು ಮತ್ತು ಪರೀಕ್ಷಾ ಸಾಧನಗಳನ್ನು ಉಚಿತ ಕೊಡುಗೆಯಾಗಿ ಮಕ್ಕಳಿಗೆ ವಿತರಿಸುವ ಮೂಲಕ ಶುಭ ಕೋರಿದರು.

ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ತಮ್ಮ ಮನಸ್ಸಿನಲ್ಲಿರುವಂತಹ ಭಯ ಮತ್ತು ಆತಂಕವನ್ನು ಬದಿಗಿಟ್ಟು, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಮಕ್ಕಳಿಗೆ ಧೈರ್ಯ ತುಂಬಿದರು.ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ರವಿದಾಸ್ ಬಿಂಡಿಗನವಿಲೆ ಮಾತನಾಡಿ, ಸಮಾಜಮುಖಿ ಕೆಲಸಗಳಿಂದ ಇಡೀ ಭಾರತದಾದ್ಯಂತ ಮನೆಮಾತಾಗಿರುವ ಕರುನಾಡಿನ ಭಾಗ್ಯವಂತ ಪ್ರೀತಿಯ ಅಪ್ಪು ಅವರ ಹುಟ್ಟುಹಬ್ಬದ ಸವಿನೆನಪಿನಲ್ಲಿ ಅಪ್ಪು ಯುವ ಬ್ರಿಗೇಡ್ ಮತ್ತು ಕಸ್ತೂರಿ ಕನ್ನಡ ಡಾ ರಾಜ್ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಸಹಭಾಗಿತ್ವದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಉಪಕರಣಗಳನ್ನು ನೀಡುವ ಸೇವೆ ಮಾಡುತ್ತಿರುವ ರಾಜ್ಯಾಧ್ಯಕ್ಷರಾದ ಮುರಳಿ ರವರಿಗೆ ಮತ್ತು ಅವರ ತಂಡಕ್ಕೆ ಹಾಗೂ ವಿಶೇಷವಾಗಿ ವರ್ಷ ಪೂರ್ತಿ ಒಂದಿಲ್ಲೊಂದು ಸಮಾಜಮುಖಿ ಕಾರ್ಯಗಳನ್ನು ಸದ್ದಿಲ್ಲದೆ ಸಮಾಜ ಸೇವೆ ಮಾಡುವ ರ. ನರಸಿಂಹಮೂರ್ತಿ ರವರಿಗೆ ವಿಶೇಷವಾಗಿ ಧನ್ಯವಾದಗಳನ್ನು ತಿಳಿಸಿದರು.

ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸ ಮಾಡಿದರೆ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಎಂದರು. ಕಾರ್ಯಕ್ರಮದಲ್ಲಿ ಚೈತ್ರ ಸಂದೇಶ್ ಸ್ಟಡಿ ಸೆಂಟರ್ ನ ಅಧ್ಯಕ್ಷ ಸಂದೇಶ್ ಮಾತನಾಡಿ ಅಪ್ಪು ಅವರಂತೆ ಅವರ ಮಾಡುತ್ತಿದ್ದ ಸಮಾಜಮುಖಿ ಕೆಲಸಗಳನ್ನು ರಾಜ್ಯಾಧ್ಯಂತ ಮುಂದುವರೆಸುತ್ತಿರುವ ಅಪ್ಪು ಯೂತ್ ಬ್ರಿಗೇಡ್ ನ ರಾಜ್ಯಾಧ್ಯಕ್ಷರಾದ ಮುರಳಿ ರವರು ಮತ್ತು ಅವರ ಇಡೀ ತಂಡಕ್ಕೆ ಚಾಮುಂಡೇಶ್ವರಿ ತಾಯಿ ಹೆಚ್ಚಿನ ಶಕ್ತಿಯನ್ನು ದಯಪಾಲಿಸಲಿ ಎಂದು ಶುಭ ಹಾರೈಸಿದರು. ಈ ವೇಳೆ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಸೇರಿದಂತೆ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು