LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆಯ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದ್ದು, ರೈತರ ಜಮೀನುಗಳಿಗೆ ಹಾಗೂ ಜನನಿಬಿಡ ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಿಲ್ಲೆಯ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಚರಂಡಿ, ರಾಜ ಕಾಲುವೆಗಳ ತ್ಯಾಜ್ಯವನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಹೇಳಿದರು.
ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮುಂಗಾರು ಪೂರ್ವ ಮಳೆಯಿಂದ 14.92 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಪ್ರಮುಖವಾಗಿ ಬಾಳೆ, ಮಾವು, ತರಕಾರಿ ಬೆಳೆ ಹಾಳಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದರು. ಬರ ಪರಿಹಾರ ಹಣ ಅರ್ಹ ರೈತರಿಗೆ ನೀಡಲಾಗಿದೆ. ಬೆಳೆ ನಷ್ಟ ಆಗಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದ ನಂತರ ಶೀಘ್ರ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಎಂ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು