LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ದ್ವಿತೀಯ ಪಿಯುಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಬಳ್ಳಾಪುರ: ಇದೇ ತಿಂಗಳ 30 ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿಯ 2ನೇ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಲೋಪಗಳು ಆಗದಂತೆ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ “ದ್ವಿತೀಯ ಪಿ.ಯು.ಸಿಯ ಪರೀಕ್ಷೆ-2” ಕುರಿತ ಪೂರ್ವಭಾವಿ ಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏಪ್ರಿಲ್ 30 ರಿಂದ ಮೇ 13 ರವರೆಗೆ ನಡೆಯುವ ದ್ವಿತೀಯ ಪಿಯುಸಿಯ ಪರೀಕ್ಷೆ-2 ಗಾಗಿ ಜಿಲ್ಲೆಯಲ್ಲಿ ಒಟ್ಟು 05 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಮತ್ತು ಚಿಂತಾಮಣಿ ನಗರಗಳಲ್ಲಿ ತಲಾ 1 ರಂತೆ ಒಟ್ಟು 5 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ-2ನ್ನು ಬರೆಯಲು ಜಿಲ್ಲೆಯಲ್ಲಿ ಒಟ್ಟು 5,353 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ. ಪ್ರವೇಶ ಪತ್ರಗಳನ್ನು ಆನ್ಲೈನ್ ಮೂಲಕ ಎಲ್ಲ ಕಾಲೇಜುಗಳಿಗೆ ವಿತರಿಸಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಸಂಪೂರ್ಣ ಜವಾಬ್ದಾರಿ ಹೊಂದಿದ್ದು, ನಿಯಮಗಳಂತೆ ಯಾವುದೇ ಸಮಸ್ಯೆಗಳು ಎದುರಾಗದಂತೆ ಪರೀಕ್ಷೆ ನಡೆಸಬೇಕು. ಪರೀಕ್ಷಾ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಹಾಗೂ ಪರೀಕ್ಷಾ ದಿನದಂದು ಆಸನಗಳ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಕಾಲೇಜು ಆವರಣದಲ್ಲಿ ಸ್ಪಷ್ಟವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಎಂದು ಸೂಚನೆ ನೀಡಿದರು.
ಇನ್ ಸ್ಟಾಗ್ರಾಮ್, ವ್ಯಾಟ್ಸ ಆಪ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗಳಂತಹ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಕಿವಿಗೊಡಬಾರದು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಸಕಲ ಭದ್ರತೆಯಲ್ಲಿ ಜವಾಬ್ದಾರಿಯುತ ಅಧಿಕಾರಿಗಳ ವ್ಯಾಪ್ತಿಯಲ್ಲಿ ಇರುವುದರಿಂದ ಆಯಾ ಅಧಿಕಾರಿಗಳು ಹೆಚ್ಚಿನ ಜಾಗೃತಿವಹಿಸಿ ಕೆಲಸ ನಿರ್ವಹಿಸಲು ಅವರು ಸೂಚಿಸಿದರು. ಮಾರ್ಗಸೂಚಿಯಂತೆ ಪರೀಕ್ಷೆ ಸಿಸಿಟಿವಿ ಕಣ್ಗಾವಲುನಲ್ಲಿ ನಡೆಸಲು ಹಾಗೂ ವೆಬ್ ಕಾಸ್ಟಿಂಗ್ ನಿರ್ವಹಣೆಗೆ ಸೂಚಿಸಲಾಗಿದೆ. ಪರೀಕ್ಷೆ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ರ್ಫೋನ್, ಮೈಕ್ರೋಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ ಅನುಮತಿಸಲಾಗುವುದಿಲ್ಲ. ವಿದ್ಯಾರ್ಥಿಗ
ಳಾಗಲಿ, ಸಿಬ್ಬಂದಿಯಾಗಲಿ ಅಥವಾ ಯಾವುದೇ ಅನಧಿಕೃತ ವ್ಯಕ್ತಿಗಾಗಲಿ ಮೊಬೈಲ್ ಬಳಕೆಗೆ, ಫೋಟೋಗ್ರಾಫಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಬೆಳಕಿನ ವ್ಯವಸ್ಥೆ, ಆಸನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು ಎಂದು ಅವರು ತಿಳಿಸಿದರು. ಸುಸೂತ್ರ ಪರೀಕ್ಷೆಗೆ ಪೋಲಿಸ್ ಇಲಾಖೆ, ಖಜಾನೆ ಇಲಾಖೆ, ಸಂಬAಧಿಸಿದ ಇಲಾಖೆಗಳ ಸಹಕಾರಕ್ಕೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಮುಚ್ಚಿಸಬೇಕು. ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳನ್ನು ನಿಯಮಾನುಸಾರ ಠೇವಣಿ ಇರಿಸಿ ಸೂಚಿತ ನಿರ್ದೇಶನದಂತೆ ಸಂಬAಧಪಟ್ಟವರು ವಿತರಿಸಬೇಕು. ಪರೀಕ್ಷೆ ಕೇಂದ್ರಗಳ ಹೊರಗೆ ಜನಸಂದಣಿ ಇರಕೂಡದು. ಜನಸಂದಣಿ ಮೇಲೆ ನಿಗಾ ಇಡಬೇಕು. ಪರೀಕ್ಷೆ ಕೇಂದ್ರಗಳ ಸ್ವಚ್ಛತೆ, ಸಿಸಿಟಿವಿ ವ್ಯವಸ್ಥೆ, ಬಳಸುವ ವಾಹನಗಳು, ವೆಬ್ ಕಾಸ್ಟಿಂಗ್ ಸರಿಯಾಗಿರಬೇಕು. ನಿರಂತರ ವಿದ್ಯುತ್ ಸೌಲಭ್ಯ ಇರಬೇಕು. ಪರೀಕ್ಷಾ ಕೇಂದ್ರಕ್ಕೆ ಒಂದು ವೀಲ್ ಚೇರ್ ವ್ಯವಸ್ಥೆ ಮಾಡಬೇಕು. ಈ ಎಲ್ಲ ಸೌಲಭ್ಯಗಳಿಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ.ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಓದಿಕೊಂಡು ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ದಿನದಂದು ಅರ್ಧ ಗಂಟೆ ಮುಂಚಿತವಾಗಿ ಹಾಜರಿರಬೇಕು. ಜಿಲ್ಲಾಡಳಿತವು ಪರೀಕ್ಷಾ ವಾತಾವರಣಕ್ಕೆ ಪೂರಕವಾದ ಸಕಲ ವ್ಯವಸ್ಥೆಯನ್ನು ಕಲ್ಪಿಸಿದ್ದು, ನಿರ್ಭಿತಿಯಿಂದ ಪರೀಕ್ಷೆಯನ್ನು ಎದುರಿಸಿ ಜಿಲ್ಲೆಗೆ ಉತ್ತಮ ಫಲಿತಾಂಶ ತರುವಂತೆ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಈ ವೇಳೆ ಶುಭಕೋರಿದರು.ಸಭೆಯಲ್ಲಿ ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್. ಆದಿಶೇಷರಾವ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು