LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಜಿಲ್ಲಾ ಉಸ್ತುವಾರಿ ಸಚಿವರಿಂದ ಪಶು ಆಸ್ಪತ್ರೆ ಗೆ ಚಾಲನೆ

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು ಆಸ್ಪತ್ರೆ ಕಟ್ಟಡವನ್ನು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಪಶು ಆಸ್ಪತ್ರೆ ಸೇವೆ ಸಮರ್ಪಕವಾಗಿ ಉಪಯೋಗವಾಗಲಿ.

ಎಲ್ಲಿ ಪಶು ಆಸ್ಪತ್ರೆ ಅಗತ್ಯತೆ ಕಡಿಮೆಯಾಗಿದೆ ಎಂಬ ಬಗ್ಗೆ ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಅಗತ್ಯವಿರುವ ಕಡೆ ಪಶು ಆಸ್ಪತ್ರೆಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದರು.ಹಾಲಿಗೆ 3 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿದ್ದು ಇದು ನೇರವಾಗಿ ರೈತರಿಗೆ, ಹೈನುಗಾರಿಕೆ ಅವಲಂಬಿತರಿಗೆ ತಲುಪುತ್ತಿದೆ. ಬರಗಾಲ ಹಿನ್ನೆಲೆಯಲ್ಲಿ ನೀರು ಸೌಲಭ್ಯ ಇರುವ ಕಡೆ ಮೇವಿನ ಬೀಜದ ಕಿಟ್ ಒದಗಿಸಲಾಗುತ್ತಿದೆ. ಪಶುಪಾಲನಾ ಇಲಾಖೆ ಸಿಬ್ಬಂದಿ ಕೊರತೆಯನ್ನು ಹಂತ ಹಂತವಾಗಿ ನೀಗಿಸಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಪಶು ಆಸ್ಪತ್ರೆ ವೈದ್ಯರುಗಳ ನೇಮಕ ಆಗಬೇಕಿದೆ. ತಾಂತ್ರಿಕ ತಜ್ಞರ ನಿಯೋಜನೆಯು ಮಾಡಬೇಕಿದೆ. ರಾಸುಗಳ ಅನುಕೂಲಕ್ಕಾಗಿ ಆಸ್ಪತ್ರೆ ನಿರ್ಮಾಣವಾಗಿದೆ. ಪರಿಪೂರ್ಣವಾಗಿ ಎಲ್ಲ ಸೌಲಭ್ಯಗಳು ಲಭ್ಯವಾದರೆ ಮತ್ತಷ್ಟು ನೆರವಾಗಲಿದೆ ಎಂದರು.

ಇದೇ ವೇಳೆ ಮೇವಿನ ಬೀಜದ ಕಿಟ್‍ಗಳನ್ನು ರೈತರಿಗೆ ವಿತರಿಸಲಾಯಿತು.ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಮಹೇಶ್, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕರಾದ ಹನುಮೇಗೌಡ, ನಗರಸಭಾ ಸದಸ್ಯರು, ಇತರೆ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು