LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ದೀಕ್ಷಿತ್ ಶೆಟ್ಟಿ ಅಭಿನಯದ "ಬ್ಯಾಂಕ್ of ಭಾಗ್ಯಲಕ್ಷ್ಮಿ" ಚಿತ್ರದ ಅನಿಮೇಷನ್ ಟೀಸರ್ ಗೆ ಮೆಚ್ಚುಗೆಯ ಮಹಾಪೂರ

ರಂಗಿ ತರಂಗ', `ಅವನೇ ಶ್ರೀಮನ್ನಾರಾಯಣ' ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ, "ದಿಯಾ" ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಅನಿಮೇಷನ್ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ.

ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ. ಅನಿಮೇಷನ್ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ದೇಶಕರು.

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ.ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ "ಪ್ರೇಮಂ ಪೂಜ್ಯಂ" ಹಾಗೂ "ಕೌಸಲ್ಯ ಸುಪ್ರಜಾ ರಾಮ" ಚಿತ್ರಗಳ ಮೂಲಕ ಜನಪ್ರಿಯರಾಗಿರುವ ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ಎಂ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಭಿಷೇಕ್ ಅವರೆ ಬರೆದಿದ್ದಾರೆ. ಹೆಸರಾಂತ ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಸಚಿನ್ ಹಾಗೂ ಅಭಿಷೇಕ್ ಅವರ ಸಾರಥ್ಯದ "ಪಿನಾಕ" ವಿ ಎಫ್ ಎಕ್ಸ್ ಸ್ಟುಡಿಯೋದಲ್ಲೇ "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ಚಿತ್ರದ ಟೀಸರ್ ನ ಅನಿಮೇಷನ್ ವರ್ಕ್ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು